ಸಾರ್ವಜನಿಕರು, ವಿದ್ಯಾರ್ಥಿಗಳು ಪರಿಸರದ ಮಹತ್ವ, ಅರಿವು ಮತ್ತು ಜಾಗೃತಿ ಹೊಂದುವುದು ಅಗತ್ಯ : ಸಿ. ಡಿ. ಗೀತಾ
It is necessary for the public and students to be aware of the importance, knowledge and awareness o
ಲೋಕದರ್ಶನ ವರದಿ
ಧಾರವಾಡ 06 : ಸಮಾಜದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು, ಮಕ್ಕಳು ಸೇರಿದಂತೆ ಎಲ್ಲರೂ ಪರಿಸರದ ಮಹತ್ವ, ಅರಿವು ಮತ್ತು ಜಾಗೃತಿ ಹೊಂದುವುದು ಅತೀ ಅಗತ್ಯ. ಈ ದಿಶೆಯಲ್ಲಿ ಸಂಘ, ಸಂಸ್ಥೆಗಳು, ಶಾಲಾ, ಕಾಲೇಜುಗಳು ಅರಿವು ಅಭಿಯಾನ ಹಮ್ಮಿಕೊಳ್ಳುವುದು ಅತ್ಯಗತ್ಯ ಎಂದು ಧಾರವಾಡ ಅಪರ ಜಿಲ್ಲಾಧಿಕಾರಿ ಸಿ. ಡಿ. ಗೀತಾ ಹೇಳಿದರು.
ಅವರು ಕರ್ನಾಟಕ ವಿದ್ಯಾವರ್ಧಕ ಸಂಘದ ‘ಕೃಷಿ ಹಾಗೂ ಪರಿಸರ ಮಂಟಪ’ದ ವತಿಯಿಂದ ವಿಶ್ವ ಪರಿಸರ ದಿನಾಚರಣೆ-2026 ರ ಅಂಗವಾಗಿ ಶಿವಾಜಿ ಸರ್ಕಲ್ ನಲ್ಲಿಯ ಕೆ.ಇ.ಬೋರ್ಡ ಪದವಿ ಮಹಾವಿದ್ಯಾಲಯದಎನ್.ಎಸ್.ಎಸ್. ಘಟಕದ ಸಹಯೋಗದೊಂದಿಗೆ ಆಯೋಜಿಸಿದ್ದ ‘ಸಸಿ ನೆಡುವ ಅಭಿಯಾನ’ ಕ್ಕೆ ಸಸಿ ನೆಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ಪರಿಸರರಕ್ಷಣೆ ಮತ್ತು ಅಭಿವೃದ್ಧಿಗಾಗಿ ಸ್ಥಳೀಯ ಸಂಘ, ಸಂಸ್ಥೆಗಳು, ಶಾಲಾ, ಕಾಲೇಜುಗಳು ಮುಂದೆ ಬಂದಲ್ಲಿ ಜಿಲ್ಲಾಡಳಿತದಿಂದ ಸಹಕಾರ ನೀಡಲಾಗುವುದು ಎಂದರು.
ಅಭಿಯಾನದ ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಎಂ. ಎ. ಸಿದ್ಧಾಂತಿ ಮಾತನಾಡಿ, ಪರಿಸರವನ್ನು ಸಂರಕ್ಷಿಸಿ, ಉಳಿಸಿ, ಬೆಳೆಸುವುದು ಪ್ರತಿಯೊಬ್ಬರ ಆದ್ಯಕರ್ತವ್ಯವಾಗಿದೆ. ಈ ದಿಶೆಯಲ್ಲಿ ತಮ್ಮ ಕಾಲೇಜಿನ ವಿಶಾಲವಾದ ಮೈದಾನದಲ್ಲಿ ಸಸಿ ನೆಟ್ಟು ಬೆಳೆಸಿ, ಪೋಷಿಸಿದ ಕುರಿತುತಮ್ಮಅನುಭವ ಹಂಚಿಕೊಂಡರು.
ಕೃಷಿ ಮತ್ತು ಪರಿಸರ ಮಂಟಪದ ಸಂಚಾಲಕ ಗುರು ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘದ ಕೃಷಿ ಮತ್ತು ಪರಿಸರ ಮಂಟಪದಿಂದ ಮುಂಬರುವ ದಿನಗಳಲ್ಲಿ ಪರಿಸರಕ್ಕೆ ಸಂಬಂಧಿಸಿದಂತೆ ಹಮ್ಮಿಕೊಳ್ಳುವ ಮೌಲಿಕಕಾರ್ಯ ಚಟುವಟಿಕೆಗಳ ಕುರಿತು ವಿವರಿಸಿದರು.
ಸತೀಶತುರಮರಿ, ವಿಶ್ರಾಂತಆಯ್.ಎಫ್.ಎಸ್. ಅಧಿಕಾರಿ ಕಿನ್ನಾಳ.ಎನ್.ಎಸ್.ಎಸ್. ಘಟಕದ ಸಂಯೋಜನಾಧಿಕಾರಿ ಈಶ್ವರರಾವ್ ಕರಾತ.ಡಾ. ಮೋಹನ ಕುಮಾರ ಥಂಬದ.ಪ್ರೊ.ಎನ್. ಆರ್.ಬಾಳಿಕಾಯಿ, ಡಾ.ಅಶೋಕ ಕೋರಿ.ಚನ್ನುಗೌಡ ಪಾಟೀಲ.ಡಾ. ರಾಮಚಂದ್ರ. ನಾಗರಾಜ ಹೂಗಾರ. ಸುನೀತ ಪುರೋಹಿತ. ವಕೀಲರಾದ ಸಿ.ಎಂ.ಜಾಲಾದಿ.ಆರ್. ವಿ. ದೇಶಪಾಂಡೆ ಮತ್ತು ಆನಂದ ಎಲಿಗಾರ. ಶಿವಪ್ಪ ಗಾಣಿಗೇರ. ವಿದ್ಯಾಕುಲಕರ್ಣಿ ಸೇರಿದಂತೆ ಮಹಾವಿದ್ಯಾಲಯದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮತ್ತಿತರರು ಭಾಗವಹಿಸಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 