ಸರ್ಕಾರಿ ಶಾಲೆ, ಕಾಲೇಜುಗಳನ್ನು ಉಳಿಸುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯ: ಸಿದ್ದಣ್ಣ ಪರಮೇಶ್ವರ
ಲೋಕದರ್ಶನ ವರದಿ
ಕಂಪ್ಲಿ 29: ಸರ್ಕಾರಿ ಶಾಲೆ,ಕಾಲೇಜುಗಳನ್ನು ಉಳಿಸುವುದು ಪ್ರತಿಯೊಬ್ಬ ಕನ್ನಡಿಗರ ಆದ್ಯ ಕರ್ತವ್ಯವಾಗಿದೆ ಎಂದು ಪಟ್ಟಣದ ಷಾಮಿಯಾಚಂದ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸಿದ್ದಣ್ಣ ಪರಮೇಶ್ವರ ತಿಳಿಸಿದರು. ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರಿ್ಡಸಿದ್ದ ಕಾಲೇಜಿನ ವಿವಿಧ ಸಮಿತಿಗಳ ಮುಕ್ತಾಯ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಕೆ.ಶಿವಕುಮಾರ ಮಾತನಾಡಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವನೆ ಮೈಗೂಡಿಸಿಕೊಳ್ಳಬೇಕು ಹಾಗೂ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಹೊಸ ಕೋರ್ಸ್ ಗಳನ್ನು ಆರಂಭಿಸಿದ್ದ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ಇದೇ ಸಂದರ್ಭದಲ್ಲಿ 2025-26ನೇ ಶೈಕ್ಷಣಿಕ ವರ್ಷದಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಾಣಿಜ್ಯ ವಿಭಾಗದ ಸಂಗೀತಾ, ಸುಷ್ಮಾ, ಕಲಾವಿಭಾಗದ ವೀರೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕನ್ನಡ ಹಿತರಕ್ಷಕಸಂಘದ ಗೌರವಾಧ್ಯಕ್ಷ ಕ.ಮ.ಹೇಮಯ್ಯಸ್ವಾಮಿ, ಸಹಾಯಕ ಪ್ರಧ್ಯಾಪಕರಾದ ಅನ್ನಪೂರ್ಣ ಗುಡದೂರು, ರಾಜ್ಮಾ ಟಿ.ಎಂ.ಆರ್. ಚಂದ್ರಶೇರ್ ವಿ ಬಿಳಿಗುಡ್ಡ, ಎ.ಜೆ.ವೀರಭದ್ರ್ಪ, ಕೆ.ಕುಮಾರ್, ರುದ್ರಮುನಿ,ವಿದ್ಯಾರ್ಥಿಗಳು,ಕಾಲೇಜಿನ ಸಿಬ್ಬಂದಿಗಳು ಇದ್ದರು.