ಬೆಳಗಾವಿ

ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸುವುದು ಬುದ್ದಿ ಜೀವಿಗಳಾದ ನಮ್ಮೆಲ್ಲರ ಜವಾಬ್ದಾರಿ

ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸುವುದು ಬುದ್ದಿ ಜೀವಿಗಳಾದ ನಮ್ಮೆಲ್ಲರ ಜವಾಬ್ದಾರಿ
It is the responsibility of all of us—as thinking individuals—to make the district free of child lab

ಲೋಕದರ್ಶನ ವರದಿ 

ಬೆಳಗಾವಿ 10 : ಬಾಲ ಕಾರ್ಮಿಕ ಪದ್ಧತಿ ಎಂಬ ಸಾಮಾಜಿಕ ಪಿಡುಗನ್ನು ತೊರೆದು ಹಾಕುವುದು ಅಗತ್ಯವಾಗಿದೆ. ಬಾಲ ಕಾರ್ಮಿಕರ ಕುರಿತು ಮಾತನಾಡುವುದು ಸುಲಭವಾಗಿದ್ದು ಇದನ್ನು ತಡೆಗಟ್ಟಲು ಬುದ್ಧಿ ಜೀವಿಗಳಾದ ನಾವೆಲ್ಲ ಗಂಭೀರವಾಗಿ ಚಿಂತಿಸಿ ಜಿಲ್ಲೆ, ರಾಷ್ಟ್ರವನ್ನು ಬಾಲ ಕಾರ್ಮಿಕ ಮುಕ್ತ ರಾಷ್ಟ್ರವನ್ನಾಗಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. 

ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ ಅವರಣದ ಸಭಾಂಗಣದಲ್ಲಿ ಗುರುವಾರ (ಸೆ.10) ಜರುಗಿದ ಕೃಷಿ ಕ್ಷೇತ್ರದ ಕಬ್ಬು ಕಟಾವು ಕಾರ್ಯದಲ್ಲಿ ಮಕ್ಕಳ ಬಳಕೆ ನಿಷೇಧಿಸಿ ಸಕ್ಕರೆ ಉತ್ಪಾದಕರಿಗೆ ಆಗುವ ಸವಲತ್ತುಗಳ ಕುರಿತು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. 

ಸಕ್ಕರೆ ಅಂತರಾಷ್ಟ್ರೀಯ ಮಟ್ಟದ ದೊಡ್ಡ ದೊಡ್ಡ ಕಂಪನಿಗಳಿಗೆ ಅವಶ್ಯಕವಾದ ಪ್ರಮುಖ ಕಚ್ಚಾ ವಸ್ತುವಾಗಿದೆ. ಆದರೆ ಕಂಪನಿಗಳಿಗೆ ಅಗತ್ಯವಿರುವ ವಸ್ತುವಿನ ಉತ್ಪಾದನೆ ಅಥವಾ ಉತ್ಪಾದನಾ ಸರಪಳಿಯ ಯಾವುದೇ ಹಂತದಲ್ಲಿ ಮಕ್ಕಳನ್ನು ಬಳಸಿಕೊಂಡು ಉತ್ಪಾದನೆ ಮಾಡಲಾಗಿದ್ದರೆ, ಅಂತಹ ವಸ್ತುಗಳನ್ನು ಆಮದು ಮಾಡಿಕೊಳ್ಳಲು ಕಂಪನಿಗಳು ಹಿಂದೇಟು ಹಾಕುತ್ತವೆ. ಹೀಗಾಗಿ ಸಕ್ಕರೆ ಉತ್ಪಾದನೆಯಲ್ಲಿ ಬಾಲ ಕಾರ್ಮಿಕ ಪದ್ಧತಿಗೆ ಸಂಪೂರ್ಣ ಕಡಿವಾಣ ಹಾಕುವುದು ಅಗತ್ಯವಾಗಿದೆ ಎಂದರು. 


ಸುದ್ದಿ ಓದಿ