ಶಾಲೆಯ ಋಣ ತೀರಿಸಲು ಏಳು ಜನ್ಮ ಬೇಕು
It would take seven lifetimes to repay the debt owed to the school
ಲೋಕದರ್ಶನ ವರದಿ
ಮುಧೋಳ 20: “ನಾವು ಕಲಿತ ಶಾಲೆಯ ಋಣವನ್ನು ತೀರಿಸಲು ಯಾರಿಂದಲೂ ಸಾಧ್ಯವಿಲ್ಲ. ಶಾಲೆ ಕೇವಲ ನಾಲ್ಕು ಗೋಡೆಗಳ ಕಟ್ಟಡವಲ್ಲ; ಅದು ನಮ್ಮ ಬದುಕಿಗೆ ಭದ್ರವಾದ ಅಡಿಪಾಯ ಹಾಕಿಕೊಟ್ಟ ಸರಸ್ವತಿ ಮಂದಿರ” ಎಂದು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಆರಿ್ಬ. ತಿಮ್ಮಾಪುರ ಹೇಳಿದರು.
ಮುದ್ದೇಬಿಹಾಳ ಸಮೀಪದ ಯಾದವಾಡ ಗ್ರಾಮದ ಜಿಎನ್‌ಎಸ್ ಪ್ರೌಢಶಾಲೆಯಲ್ಲಿ ಯಾದವಾಡ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ವತಿಯಿಂದ ಆಯೋಜಿಸಿದ್ದ ಶಾಸಕರ 65ನೇ ಹುಟ್ಟುಹಬ್ಬದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಶಾಲೆಯಲ್ಲಿ ಕಲಿತ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಉತ್ತಮ ಕೆಲಸ ಮಾಡಬೇಕು. ಬಡ ಹಾಗೂ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು, ಸಹಕಾರ ಮತ್ತು ಪುಸ್ತಕಗಳನ್ನು ನೀಡುವ ಮೂಲಕ ಅವರನ್ನು ಪ್ರೋತ್ಸಾಹಿಸಬೇಕು. ನಮಗೆ ಪಾಠ ಕಲಿಸಿದ ಶಿಕ್ಷಕರನ್ನು ಸದಾಕಾಲ ಗೌರವದಿಂದ ಕಾಣಬೇಕು ಎಂದು ತಿಮ್ಮಾಪುರ ಕರೆ ನೀಡಿದರು.
1976ರಿಂದ 1979ರವರೆಗೆ ಇದೇ ಜಿಎನ್‌ಎಸ್ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದಾಗಿ ಸ್ಮರಿಸಿದ ಅವರು, ಅಂದಿನ ಶಿಕ್ಷಕರು ನೀಡಿದ ಬೋಧನೆ ಮತ್ತು ಜೀವನ ಮೌಲ್ಯಗಳು ಇಂದಿಗೂ ತಮ್ಮ ಮನಸ್ಸಿನಲ್ಲಿ ಉಳಿದಿವೆ ಎಂದರು. ವಿದ್ಯಾರ್ಥಿಗಳು ಶ್ರದ್ಧೆಯಿಂದ ತರಗತಿಗಳಿಗೆ ಹಾಜರಾಗಿ ಶಿಕ್ಷಕರ ಮಾರ್ಗದರ್ಶನ ಪಡೆದು ತಮ್ಮ ಬದುಕನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಶಾಲೆಯ 1965ನೇ ಬ್ಯಾಚ್‌ನ ವಿದ್ಯಾರ್ಥಿ ಹಾಗೂ ಪತ್ರಕರ್ತ ಮಲ್ಲಿಕಾರ್ಜುನ ಹೆಗ್ಗಳಗಿ ಮಾತನಾಡಿ, ಈ ಶಾಲೆಯಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಇಂದಿನ ವಿದ್ಯಾರ್ಥಿಗಳೂ ಉತ್ತಮ ಸಾಧನೆ ಮಾಡಬೇಕು ಎಂದು ಆಶಿಸಿದರು.
ಯಾದವಾಡ ವಿ.ವಿ. ಸಂಘದ ಅಧ್ಯಕ್ಷ ಶಿವಪ್ಪಗೌಡ ನ್ಯಾಯಮಗೌಡ ಅಧ್ಯಕ್ಷತೆ ವಹಿಸಿದ್ದರು. ಯಾದವಾಡ ಚೌಕೇಶ್ವರ ವಿರಕ್ತಮಠದ ವಿಶ್ವಾರಾಧ್ಯ ಶ್ರೀಗಳು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 