ಜ.5ರಂದು ಶ್ರೀಲಂಕಾಗೆ ಭೇಟಿ ನೀಡಲಿರುವ ಜೈಶಂಕರ್
ನವದೆಹಲಿ, ಜ 4 :ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಜ.7ರಿಂದ 5ರವರೆಗೆ ಶ್ರೀಲಂಕಾಗೆ ಭೇಟಿ ನೀಡಿ, ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಶ್ರೀಲಂಕಾ ವಿದೇಶಾಂಗ ಸಚಿವರು 2021 ಜನವರಿ 5-7 ರಿಂದ ಜೈಶಂಕರ್ ಶ್ರೀಲಂಕಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಪ್ರಕಟಣೆಯಲ್ಲಿ ತಿಳಿಸಿದೆ. ಸಚಿವರು ದ್ವಿಪಕ್ಷೀಯ ಸಂಬಂಧಗಳನ್ನು ಬಲಗೊಳಿಸುವ ಕುರಿತು ಅವರು ಶ್ರೀಲಂಕಾದ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಅದು ಮಾಹಿತಿ ನೀಡಿದೆ.2021ರಲ್ಲಿ ಸಚಿವರ ಮೊದಲ ವಿದೇಶ ಪ್ರವಾಸವಾಗಿದೆ. ಅಂತೆಯೇ, ಪರಸ್ಪರ ಆಸಕ್ತಿಯ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ನಿಕಟ ಮತ್ತು ಸೌಹಾರ್ದಯುತ ಸಂಬಂಧವನ್ನು ಬಲಪಡಿಸಲು ಎರಡೂ ದೇಶಗಳು ಹೊಂದಿರುವ ಆದ್ಯತೆಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.