ತಾಳಿಕೋಟಿ

ಜೆಡಿಎಸ್ ಪದಾಧಿಕಾರಿಗಳನ್ನು ನಿರ್ಲಕ್ಷಿಸಲಾಗುತ್ತದೆ: ಲಾಹೋರಿ

ಜೆಡಿಎಸ್ ಪದಾಧಿಕಾರಿಗಳನ್ನು ನಿರ್ಲಕ್ಷಿಸಲಾಗುತ್ತದೆ: ಲಾಹೋರಿ

ತಾಳಿಕೋಟಿ: ವಿಜಯಪುರ ಜಿಲ್ಲೆಯ ಜಾತ್ಯಾತೀತ ಜನತಾ ದಳ (ಜೆಡಿಎಸ್) ಪಕ್ಷದಲ್ಲಿರುವ ನಿಷ್ಠಾವಂತ ಕಾರ್ಯಕರ್ತ ಹಾಗೂ ಪಕ್ಷದ ಪದಾಧಿಕಾರಿಗಳನ್ನು ನಿರ್ಲಕ್ಷಿಸಲಾಗುತ್ತದೆ ಎಂದು ಜೆಡಿಎಸ್ ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಕಾರ್ಯಾಧ್ಯಕ್ಷ ಜಾಕೀರ ಹುಸೇನ ಲಾಹೋರಿ ಆರೋಪಿಸಿದ್ದಾರೆ. 

ಪತ್ರಿಕೆಯೊಂದಿಗೆ ಮಾತನಾಡಿದ ಅವರು ಇಂದು ಪಕ್ಷದಲ್ಲಿರುವ ಮೂಲ ನಿಷ್ಠಾವಂತ ಕಾರ್ಯಕರ್ತರನ್ನು ಯಾವ ಮುಖಂಡರೂ ಪರಿಗಣಿಸುತ್ತಿಲ್ಲ. ಅವರು ಪಕ್ಷಕ್ಕಾಗಿ ಪ್ರಾಮಾಣಿಕತೆಯಿಂದ ದುಡಿದು ಸಂಘಟಿಸುವಲ್ಲಿ ಸಾಕಷ್ಟು ಶ್ರಮವಹಿಸಿದ್ದಾರೆ. ಅವರನ್ನು ಇಂದು ಕೇಳುವವರೆ ಇಲ್ಲ. ಮುಖಂಡರು ಕೇವಲ ಕೆಲವು ಹೊಗಳುಭಟ್ಟರನ್ನು ಕಟ್ಟಿಕೊಂಡು ತಿರುಗಾಡುತ್ತಿದ್ದಾರೆ. ಅವರಾ​‍್ಯರು ಪಕ್ಷದ ನಿಷ್ಠರಲ್ಲ ಎಂದ ಅವರು ಪಕ್ಷದ ವಿವಿಧ ವಿಭಾಗಗಳ ಪ್ರಮುಖರನ್ನಾಗಿ ನೇಮಕ ಮಾಡಿದೆ. ಪಕ್ಷದಲ್ಲಿ ಇವರಿಗೆ ಮುಖ್ಯ ಜವಾಬ್ದಾರಿಯನ್ನು ಹೊರಿಸಲಾಗಿದೆ. ಆದರೆ ಮುಖಂಡರು ಇವರನ್ನು ಕರೆದು ಮಾತನಾಡುವ ಕನಿಷ್ಟ ಸೌಜನ್ಯವನ್ನು ತೋರುತ್ತಿಲ್ಲವೆಂದರೆ ಮುಂದಿನ ಚುನಾವಣೆಯನ್ನು ನಾವು ಎದುರಿಸುವದಾದರೂ ಹೇಗೆ ಎಂಬ ಪ್ರಶ್ನೆ ಉದ್ಭವಿಸುತ್ತದೆ.  

ಜೆಡಿಎಸ್ ರಾಜ್ಯಾಧ್ಯಕ್ಷರು ಈ ಗಂಭೀರ ವಿಷಯದ ಸವಿಸ್ತಾರ ವರದಿಯನ್ನು ಪಡೆದು ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕು. ಇಡೀ ಜಿಲ್ಲೆಯಲ್ಲಿ ನಮ್ಮ ಪಕ್ಷಕ್ಕೆ ಈ ಬಾರಿ ಉತ್ತಮ ಅವಕಾಶಗಳಿವೆ. ಎರಡೂ ರಾಷ್ಟ್ರೀಯ ಪಕ್ಷಗಳಿಂದ ಜನ ಬೇಸತ್ತು ಹೋಗಿದ್ದಾರೆ. ಪಕ್ಷವನ್ನು ಅತ್ಯುತ್ತಮವಾಗಿ ಸಂಘಟಿಸುವ ಅಗತ್ಯ ಇದೆ ಇದಕ್ಕಾಗಿ ಎಲ್ಲ ನಿಷ್ಠಾವಂತ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವ ಅಗತ್ಯ ಇದೆ ಎಂದು ಅವರು ಹೇಳಿದರು. 


ಸುದ್ದಿ ಓದಿ