ಪಹಲ್ಗಾಮ ಹತ್ಯೆ ಖಂಡಿಸಿ ರಾಣೆಬೆನ್ನೂರಲ್ಲಿ ಜೆಡಿಎಸ್ ಪ್ರತಿಭಟನೆ
JDS protests in Ranebennur condemning Pahalgam killings
ಪಹಲ್ಗಾಮ ಹತ್ಯೆ ಖಂಡಿಸಿ ರಾಣೆಬೆನ್ನೂರಲ್ಲಿ ಜೆಡಿಎಸ್ ಪ್ರತಿಭಟನೆ
ರಾಣಿಬೆನ್ನೂರ 26 : ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಹತ್ಯೆ ಮಾಡಿದ ಉಗ್ರರಗ್ರಾಮಿಗಳನ್ನು ಪತ್ತೆ ಹಚ್ಚಿ ಸರಿಯಾದ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ ತಾಲೂಕಿನ ಜೆಡಿಎಸ್ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಆರ್.ಎಸ್ ಭಾಗವಾನರ ಅವರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರವಾಸಿಗರನ್ನು ಕೊಲೆ ಮಾಡಿದ ಉಗ್ರಗಾಮಿಗಳ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿ ಖಂಡನೀಯವಾಗಿದ್ದು, ದೇಶದ್ರೋಹಿಗಳನ್ನು ಮಟ್ಟ ಹಾಕಬೇಕು ಎಂದವರುಗಳು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ರಮೇಶ ಮಾಕನೂರ, ಸಿದ್ದಪ್ಪ ಗುಡಿಮುಂದ್ಲರ, ವೀರ್ಪ ಆಣೂರ, ಶಿವಪ್ಪ ಕಡೂರ, ಶಿವಪ್ಪ ಬಾಣಾವರ, ಇಬ್ರಾಹಿಂ ಯಲಗಚ್ಚಿ, ದೀಪಾ ದಳವಾಯಿ, ಗಂಗಾ ಇಚ್ಚಂಗಿ ಮತ್ತಿತರರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 