ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಉದ್ಭವಿಸದಂತೆ ನೋಡಿಕೊಳ್ಳಿ: ಜಿಪಂ ಅಧ್ಯಕ್ಷ ಪಾಟೀಲ
ಗದಗ 15: ಬಹು ಗ್ರಾಮ ಕುಡಿಯುವ ನೀರು ಯೋಜನೆಯಡಿಯಲ್ಲಿ ಜಿಲ್ಲೆಯ ಪ್ರತಿ ಮನೆ ಮನೆಗೂ ಪೈಪ್ಲೈನ್ ಅಳವಡಿಸಿ, ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ಥಿಗೊಳಿಸುವ ಮೂಲಕ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಬೇಸಿಗೆಯಲ್ಲಿ ಎದುರಾಗದಂತೆ ಮುಂಜಾಗೃತೆ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿದ್ಧಲಿಂಗೇಶ್ವರ ಎಚ್.ಪಾಟೀಲ್ ಸೂಚಿಸಿದರು.
ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿರುವ ವಸತಿ ನಿಲಯಗಳಿಗೆ ಹಾಗೂ ಆಸ್ಪತ್ರೆಗಳಿಗೆ ನೀರಿನ ಅಗತ್ಯತೆ, ನೀರು ಸರಬರಾಜುವಿಗೆ ತಗಲುವ ವೆಚ್ಚದ ಕುರಿತು ಮಾ.1ರೊಳಗಾಗಿ ಕ್ರೀಯಾ ಯೋಜನೆ ಸಲ್ಲಿಸಬೇಕು. ಸಣ್ಣ ಪುಟ್ಟ ಸಮಸ್ಯೆಗಳಿಂದ ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶೀಘ್ರವೇ ದುರಸ್ಥಿಗೊಳಿಸಬೇಕು ಎಂದು ಜಿ.ಪಂ ಅಧ್ಯಕ್ಷರು ನುಡಿದರು.
ಜಿಪಂ ಉಪಾಧ್ಯಕ್ಷೆ ಮಲ್ಲಮ್ಮ ಬಿಚ್ಚೂರ ಮಾತನಾಡಿ, ಗಜೇಂದ್ರಗಡದ ಕಾಲಕಾಲೇಶ್ವರದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 250 ವಿದ್ಯಾಥರ್ಿಗಳು ವ್ಯಾಸಂಗ ಮಾಡುತ್ತಿದ್ದಾರೆ. ನೀರಿನ ಸಮಸ್ಯೆ ಉಂಟಾಗಿರುವುದರಿಂದ ಪ್ರತಿನಿತ್ಯ ಟ್ಯಾಂಕರ್ ಮೂಲಕ ನೀರು ಹಾಕಿಸಿಕೊಳ್ಳುತ್ತಿದ್ದು, ವಸತಿ ಶಾಲೆಯಲ್ಲಿನ ನೀರಿನ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಬೇಕು ಎಂದರು.
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ಪೂರೈಸಲು ಪೈಪ್ಲೈನ್ ಅಳವಡಿಕೆ, ಪಂಪ್ ನಿಮರ್ಾಣ ಹಾಗೂ ನೀರಿನ ತೊಟ್ಟಿಗಳನ್ನು ನಿಮರ್ಿಸಲು ಜಿಪಂ ಅಧ್ಯಕ್ಷರ ವಿವೇಚನಾ ಅನುದಾನದಡಿ ಸುಮಾರು 1 ಕೋಟಿ ರೂ. ಬಿಡುಗಡೆಯಾಗಿದೆ. ಜಿಲ್ಲೆಯಾದ್ಯಂತ 432 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, 378 ಘಟಕಗಳು ಪ್ರಾರಂಭವಿದ್ದರೆ 61 ನೀರಿನ ಘಟಕಗಳು ಕೆಟ್ಟು ನಿಂತಿವೆ. ಅದರಲ್ಲಿ 23 ಘಟಕಗಳು ತೀರಾ ಹದಗೆಟ್ಟಿದ್ದು, ಇನ್ನುಳಿದವುಗಳು ಪಂಪ್ ರಿಪೇರಿ, ಮೇಮೋರಿ, ವಿದ್ಯುತ್ ಸಮಸ್ಯೆಯಿಂದ ಕೆಟ್ಟು ನಿಂತಿವೆ. ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ಥಿಗೊಳಿಸಲು ಅನುದಾನದ ಅಗತ್ಯವಿದ್ದು, ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜನೀಯರ್ ಪಿ.ಎ.ಕನವಳ್ಳಿ ತಿಳಿಸಿದರು.
ಜಿಪಂ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ. ಆನಂದ್ ಕೆ., ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಈರಪ್ಪ ನಾಡಗೌಡ್ರು, ಜಿಪಂ ಸದಸ್ಯ ಹನುಮಂತಪ್ಪ ಪೂಜಾರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 