ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಶಾಲೆಗೆ ಅಂತರರಾಷ್ಟ್ರೀಯ ಕೀರ್ತಿ
JSS Sri Manjunatheshwar School Students Bring International Glory
ಥಾಯ್ಲೆಂಡ್ನಲ್ಲಿ ನಡೆದ ಹೀರೋಸ್ ಟೆಕ್ವಾಂಡೋ ಚಾಂಪಿಯನ್ಶಿಪ್ನಲ್ಲಿ ವಿದ್ಯಾರ್ಥಿಗಳಿಗೆ ಕಂಚಿನ ಪದಕ
ಧಾರವಾಡ, ಆ. 18: ಮೃತ್ಯುಂಜಯ ನಗರದ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳಾದ ಅರ್ಮಾನ್ ಅಮೀರ್ಜಾನ್ ಕಲ್ಲಿಮಣಿ (3ನೇ ತರಗತಿ) ಹಾಗೂ ಶಫೀನ್ ಕಲ್ಲಿಮಣಿ (5ನೇ ತರಗತಿ) ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಧಾರವಾಡದ ಟೆಕ್ವಾಂಡೋ, ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ಈ ಇಬ್ಬರು ವಿದ್ಯಾರ್ಥಿಗಳು ಭಾರತದ ಪರವಾಗಿ ಥಾಯ್ಲೆಂಡ್ನ ಪಟ್ಟಾಯ ಸಿಟಿ, ಚೋನ್ಬುರಿಯಲ್ಲಿ ನಡೆದ 9ನೇ ಹೀರೋಸ್ ಟೆಕ್ವಾಂಡೋ ಇಂಟರ್ನ್ಯಾಷನಲ್ ಚಾಂಪಿಯನ್ಶಿಪ್–2026ರಲ್ಲಿ ಭಾಗವಹಿಸಿದ್ದರು. ಏಥಿoಡಿugi PSS ವಿಭಾಗದಲ್ಲಿ ಸ್ಪರ್ಧಿಸಿದ ಇಬ್ಬರೂ ವಿದ್ಯಾರ್ಥಿಗಳು ಕಂಚಿನ ಪದಕ ಗೆದ್ದು ಶಾಲೆ ಹಾಗೂ ದೇಶಕ್ಕೆ ಹೆಮ್ಮೆ ತಂದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಜೆ.ಎಸ್.ಎಸ್. ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾಧ್ಯೆ ಹಾಗೂ ಶಾಲೆಯ ಪ್ರಾಚಾರ್ಯೆ ತ್ರಿವೇಣಿ ಆರ್. ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 