ಧಾರವಾಡ - ಹುಬ್ಬಳ್ಳಿ

ಇಸ್ಕಾನ್ ಹೆರಿಟೇಜ್ ಫೆಸ್ಟ್‌ ನಲ್ಲಿ ಜೆ.ಎಸ್‌.ಎಸ್ ವಿದ್ಯಾರ್ಥಿಗಳ ಸಾಧನೆ

ಇಸ್ಕಾನ್ ಹೆರಿಟೇಜ್ ಫೆಸ್ಟ್‌ ನಲ್ಲಿ ಜೆ.ಎಸ್‌.ಎಸ್ ವಿದ್ಯಾರ್ಥಿಗಳ ಸಾಧನೆ

ಲೋಕದರ್ಶನ ವರದಿ 

ಧಾರವಾಡ  07: ಇಸ್ಕಾನ್ ಸಂಸ್ಥೆಯು ಆಯೋಜಿಸಿದ್ದ ಪ್ರತಿಷ್ಠಿತ 'ಹೆರಿಟೇಜ್ ಫೆಸ್ಟ್‌ 2026' ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಸ್ಪರ್ಧೆಗಳಲ್ಲಿ ಧಾರವಾಡದ ವಿದ್ಯಾಗಿರಿಯ ಜೆ.ಎಸ್‌.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭರ್ಜರಿ ಯಶಸ್ಸು ಸಾಧಿಸುವ ಮೂಲಕ ಶಾಲೆಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಚಿರಾಗ್ ವಾಗ್ಮೊರೆ ಮೌಲ್ಯಾಧಾರಿತ ಶಿಕ್ಷಣ ಸ್ಪರ್ಧೆಯಲ್ಲಿ ಧಾರವಾಡ ಜಿಲ್ಲೆ ಮತ್ತು ಶಾಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಬಹುಮಾನ ರೂಪದಲ್ಲಿ ಸೈಕಲ್, ಟ್ರೋಫಿ ಮತ್ತು ಪ್ರಮಾಣಪತ್ರಗಳನ್ನು ಪಡೆದಿರುತ್ತಾನೆ. ಹಲವಾರು ವಿದ್ಯಾರ್ಥಿಗಳು ಸಮಾಧಾನಕರ ಬಹುಮಾನಗಳನ್ನು ಸಹ ಪಡೆದಿರುತ್ತಾರೆ. ಸಾಧನೆಗೈದ ವಿದ್ಯಾರ್ಥಿಗಳನ್ನು ಡಾ. ಅಜಿತ ಪ್ರಸಾದರವರು, ಆಡಳಿತಾಧಿಕಾರಿ ಶ್ರೀ ಅರಿಹಂತ ಪ್ರಸಾದ, ಶ್ರೀ ಮಹಾವೀರ ಉಪಾಧ್ಯೆ, ಶಾಲೆಯ ಪ್ರಾಚಾರ್ಯೆ ಶ್ರೀಮತಿ ಡಯಾನಾ ಹಾಗೂ ಶಿಕ್ಷಕ ವೃಂದ ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ. 


ಸುದ್ದಿ ಓದಿ