ಕ್ರೀಡಾಕೂಟದಲ್ಲಿ ಜೆಎಸ್‌ಎಸ್ ವಿದ್ಯಾರ್ಥಿಗಳ ಸಾಧನೆ
ಧಾರವಾಡ 01: 2026-27ನೇ ಸಾಲಿನ ಜಿಲ್ಲಾ ಹಾಗೂ ಕ್ಲಸ್ಟರ್ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ಜೆಎಸ್‌ಎಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ವಿಜೇತರಾಗಿ ಗಮನಾರ್ಹ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಡಾ. ಅಜಿತ್ ಪ್ರಸಾದ್, ಆಡಳಿತಾಧಿಕಾರಿಗಳಾದ ಅರಿಹಂತ ಪ್ರಸಾದ್ ಹಾಗೂ ಮಹಾವೀರ ಉಪಾಧ್ಯಾಯ, ಪ್ರಾಚಾರ್ಯೆ ಮೈನಾ ದೇವಟೆ ಮತ್ತು ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.