ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಜು.15: ನಗರದ ಮಿಲ್ಲರ್ ಪೇಟೆಯ ಜಬೀಉಲ್ಲಾ ಎನ್ನುವ 35 ವರ್ಷದ ವ್ಯಕ್ತಿ ಏ.11 ರಂದು ಕಾಣೆಯಾಗಿರುವ ಕುರಿತು ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮನವಿ ಮಾಡಿದ್ದಾರೆ.
ಕಾಣೆಯಾದ ವ್ಯಕ್ತಿಯ ಚಹರೆ ಗುರುತು: ಎತ್ತರ 5.4 ಅಡಿ, ದುಂಡುಮುಖ, ಗೋಧಿ ಮೈಬಣ್ಣ, ದುಂಡು ಮೈಕಟ್ಟು, ಕಪ್ಪು ತಲೆಕೂದಲು, ಕಪ್ಪು ಗಡ್ಡ ಹೊಂದಿದ್ದು, ಕನ್ನಡ, ತೆಲುಗು, ಹಿಂದಿ ಭಾಷೆ ಮಾತನಾಡುತ್ತಾನೆ.ಕಾಣೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ತುಂಬು ತೋಳಿನ ಜುಬ್ಬಾ, ಬಿಳಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಮಾಹಿತಿ ಸಿಕ್ಕಲ್ಲಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ದೂ.08392-272022, ಪಿ.ಐ ಮೊ.9480803045, 9480803081 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.