ಜಾಕ್ವೆಲ್ ಕುಸಿದು 500 ರೈತರಿಗೆ ಸಂಕಷ್ಟ
Jackwell collapse spells trouble for 500 farmers
ಲೋಕದರ್ಶನ ವರದಿ
ಕಾಗವಾಡ ಜು. 7: ಅಮೃತ್-2 ಕುಡಿಯುವ ನೀರಿನ ಯೋಜನೆಯ ಕಾಮಗಾರಿ ವೇಳೆ ಜಾಕ್ವೆಲ್ ಕುಸಿದ ಪರಿಣಾಮ ಸುಮಾರು 4 ಕೋಟಿ ಮೌಲ್ಯದ ನಷ್ಟ ಸಂಭವಿಸಿದ್ದು, ಸುಮಾರು 500 ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.
ಜುಲೈ 6ರಂದು ಕೃಷ್ಣಾ ನದಿ ತೀರದಲ್ಲಿ ಅಮೃತ್-2 ಯೋಜನೆಯ ಕಾಮಗಾರಿ ನಡೆಯುತ್ತಿದ್ದ ವೇಳೆ ಅಗೆತ ಮತ್ತು ಬ್ಲಾಸ್ಟಿಂಗ್ ನಡೆಸಿದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಈ ಕುರಿತು ಈ ಹಿಂದೆಯೇ ಅಧಿಕಾರಿಗಳಿಗೆ ಲಿಖಿತ ಹಾಗೂ ಮೌಖಿಕವಾಗಿ ಮಾಹಿತಿ ನೀಡಿದ್ದರೂ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ರೈತರು ದೂರಿದ್ದಾರೆ.
ಜಾಕ್ವೆಲ್ ಸಂಪೂರ್ಣವಾಗಿ ಕುಸಿದ ಪರಿಣಾಮ 75 ಅಶ್ವಶಕ್ತಿಯ ನಾಲ್ಕು ಪಂಪ್ಸೆಟ್ಗಳು, ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ತಂತಿಗಳಿಗೆ ಹಾನಿಯಾಗಿದೆ. ಸುರಕ್ಷತಾ ದೃಷ್ಟಿಯಿಂದ ವಿದ್ಯುತ್ ಸಂಪರ್ಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಘಟನೆ ಬಳಿಕ ಕಾಮಗಾರಿ ನಡೆಸುತ್ತಿದ್ದ ಅಧಿಕಾರಿಗಳು ಸ್ಥಳದಿಂದ ತೆರಳಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಶಾಂತಿನಾಥ ನೀರಾವರಿ ಯೋಜನೆಯ ಅಧ್ಯಕ್ಷ ಅಣ್ಣಾ ಅರಬಾಡೆ, ಕೃಷ್ಣಾ ರೈತ ಸೇವಾ ಸಂಘದ ಅಧ್ಯಕ್ಷ ರಾಜು ನಾಂದ್ರೆ, ನಿರ್ದೇಶಕ ಕುಮಾರ ಪಾಟೀಲ, ಕುಂತಿನಾಥ ಮಾಲಗಾವೆ, ಭರತ್ ಪಾಟೀಲ, ರಾಜು ಯಂಡಗೌಡರ, ಅರುಣ್ ಯಂಡಗೌಡರ, ಶೀತಲ್ ಮುಗಳೋಳಿ, ಪೋಪಟ್ ನಾಂದ್ರೆ, ಬಸಪ್ಪ ಬಾವೂಳಿ, ಬಾಳು ಚಮಕೇರಿ ಸೇರಿದಂತೆ ರೈತರು ಹಾನಿ ಪರೀಶೀಲಿಸಿದರು.
ರಾಜ್ಯ ಸರ್ಕಾರ, ನೀರಾವರಿ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಮೌಲ್ಯಮಾಪನ ನಡೆಸಬೇಕು. ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ 