ಬಳ್ಳಾರಿ

ಅ.3 ಮತ್ತು 4ರಂದು ಜಗದ್ಗುರು ಕೊಟ್ಟೂರು ಸ್ವಾಮಿ ಜಯಂತ್ಯೋತ್ಸವ

ಅ.3 ಮತ್ತು 4ರಂದು ಜಗದ್ಗುರು ಕೊಟ್ಟೂರು ಸ್ವಾಮಿ ಜಯಂತ್ಯೋತ್ಸವ


ಬಳ್ಳಾರಿ, ಅ.1: ನಗರದ ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠದಲ್ಲಿ ಅಕ್ಟೋಬರ್ 3 ಮತ್ತು 4ರಂದು ಶ್ರೀ ಹಾನಗಲ್ ಕುಮಾರ ಮಹಾಶಿವಯೋಗಿಗಳ 159ನೇ ಹಾಗೂ ಶ್ರೀ ಜಗದ್ಗುರು ಡಾ. ಸಂಗನಬಸವ ಮಹಾಸ್ವಾಮಿಗಳ 88ನೇ ಜಯಂತ್ಯೋತ್ಸವದ ಅಂಗವಾಗಿ ಪ್ರವಚನ, ಮಂಗಲ ಮಹೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಯಂತ್ಯೋತ್ಸವ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.  

ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಮಿತಿ ಪದಾಧಿಕಾರಿಗಳು, ನಿರಂಜನ ಜಗದ್ಗುರು ಕೊಟ್ಟೂರು ಬಸವಲಿಂಗ ಮಹಾಸ್ವಾಮೀಜಿಗಳ ಪಾವನ ಸಾನ್ನಿಧ್ಯ ಹಾಗೂ ಅಪ್ಪಣೆಯ ಮೇರೆಗೆ ಜಯಂತ್ಯೋತ್ಸವ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.  

ಅಕ್ಟೋಬರ್ 3ರಂದು ಶನಿವಾರ ಸಂಜೆ 5.30ಕ್ಕೆ ಸೋಮಸಮುದ್ರ ಹಾಗೂ ಶ್ರೀಧರಗಡ್ಡೆ ಗ್ರಾಮಗಳಿಂದ ಭಕ್ತರು ಪಾದಯಾತ್ರೆಯ ಮೂಲಕ ಶ್ರೀಮಠಕ್ಕೆ ಆಗಮಿಸಲಿದ್ದಾರೆ. ಪಾದಯಾತ್ರೆಯಲ್ಲಿ ಆಗಮಿಸುವ ಭಕ್ತರನ್ನು ಶ್ರೀಮಠದಲ್ಲಿ ಮಂಗಳವಾದ್ಯಗಳೊಂದಿಗೆ ಸ್ವಾಗತಿಸಲಾಗುವುದು. ಬಳಿಕ ಶ್ರೀ ಜಗದ್ಗುರು ಕೊಟ್ಟೂರೇಶ್ವರ ರಥೋತ್ಸವ ನಡೆಯಲಿದೆ.  


ಸುದ್ದಿ ಓದಿ