ಎನ್‌ಪಿಎಸ್ ನೌಕರರ ಸಂಘ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ
Jagadish elected as NPS Employees Association President
ಹೂವಿನಹಡಗಲಿ 27: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಶಾಖೆಯ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ಎನ್‌ಪಿಎಸ್ ನೌಕರರ ಸಂಘ ರಚನೆ ಮಾಡಲಾಗಿದೆ.ತಾಲೂಕ ಘಟಕದ ಅಧ್ಯಕ್ಷರಾಗಿ ಜಗದೀಶ್ ಧಾರವಾಡ, ಕಾರ್ಯದರ್ಶಿಯಾಗಿ ಸಹ ಶಿಕ್ಷಕರಾದ ಚನ್ನವೀರಗೌಡ, ಗೌರವಧ್ಯಕ್ಷರಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಕಾಶ್ ಕಲ್ಲನಗೌಡ್ರು, ಖಜಾಂಚಿಯಾಗಿ ಆರೋಗ್ಯ ಇಲಾಖೆಯ ಬಿ ಕಿರಣ್ ಕುಮಾರ್, ಉಪಾಧ್ಯಕ್ಷರಾಗಿ ಪಿಡಿಒ ಶಶಿಕಲಾ ಎನ್ ಕೊಪ್ಪದ ಆಯ್ಕೆಯಾಗಿದ್ದಾರೆ.
ಜಿಲ್ಲಾ ಪ್ರತಿನಿಧಿಯನ್ನಾಗಿ ನರೇಶ್ ಸಹ ಶಿಕ್ಷಕರು ಎಸ್ ಕೆ ಜಿ ಜೆ ಪ್ರೌಢಶಾಲೆ ಹಡಗಲಿ ನೇಮಕ ಮಾಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ಸಂಘದ ತಾಲೂಕ ಶಾಖೆಯ ಅಧ್ಯಕ್ಷರಾದ ಅಯ್ಯನಗೌಡ್ರು ಕೊಟ್ರಗೌಡರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಶಾಖೆ ಪದಾಧಿಕಾರಿಗಳು ಕಾರ್ಯಕಾರಿ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 