ಧಾರವಾಡ - ಹುಬ್ಬಳ್ಳಿ

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಜಗನ್ನಾಥ ಹಲಮಡಗಿ ಧಾರವಾಡ ಭೇಟಿ: ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಜಗನ್ನಾಥ ಹಲಮಡಗಿ ಧಾರವಾಡ ಭೇಟಿ: ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ
Jagannath Halamadagi, Member of the State Commission for Protection of Child Rights, visits Dharwad;

ಲೋಕದರ್ಶನ ವರದಿ 

 ಧಾರವಾಡ  05: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಜಗನ್ನಾಥ ಹಲಮಡಗಿ ಅವರು ಬುಧವಾರ ಧಾರವಾಡ ಜಿಲ್ಲೆಗೆ ಭೇಟಿ ನೀಡಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಕಲ್ಯಾಣಕ್ಕೆ ಸಂಬಂಧಿಸಿದಂತೆ ಸಮಗ್ರ ಪರೀಶೀಲನೆ ನಡೆಸಿದರು.  

ಸಭೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿ ಸಂಗ್ರಹಿಸಿ, ಅವರನ್ನು ಪುನಃ ಶಿಕ್ಷಣದ ಮುಖ್ಯವಾಹಿನಿಗೆ ಕರೆತರಲು ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಶಾಲೆಗಳಲ್ಲಿ ಮಕ್ಕಳ ಕ್ಲಬ್‌ಗಳನ್ನು ಸಕ್ರಿಯವಾಗಿ ನಡೆಸುವ ಜೊತೆಗೆ, ಮಕ್ಕಳ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸಲು ದೂರವಾಣಿ ಆಧಾರಿತ ಮಾನಸಿಕ ಆರೋಗ್ಯ ಸೇವೆಗಳ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ತಿಳಿಸಿದರು.  

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದ ಅವರು, ಜಿಲ್ಲಾ ಆಸ್ಪತ್ರೆ ಹಾಗೂ ಕಿಮ್ಸ್‌ ಆಸ್ಪತ್ರೆಯಲ್ಲಿ ಮಕ್ಕಳ ಆರೈಕೆ ಸೇವೆಗಳನ್ನು ಮತ್ತಷ್ಟು ಬಲಪಡಿಸುವಂತೆ ನಿರ್ದೇಶನ ನೀಡಿದರು.  

ಪೊಲೀಸ್ ಇಲಾಖೆಯೊಂದಿಗೆ ನಡೆದ ಚರ್ಚೆಯಲ್ಲಿ ಕಾಣೆಯಾದ ಮಕ್ಕಳು, ಪೋಕ್ಸೋ ಹಾಗೂ ಬಾಲ್ಯವಿವಾಹ ಪ್ರಕರಣಗಳ ಕುರಿತು ಪರೀಶೀಲನೆ ನಡೆಸಲಾಯಿತು. ವಿವಿಧ ಜಿಲ್ಲೆಗಳಿಂದ ಧಾರವಾಡಕ್ಕೆ ವಿದ್ಯಾಭ್ಯಾಸಕ್ಕಾಗಿ ಆಗಮಿಸುವ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಲಾಯಿತು.  

ಆಯುಷ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲೆಯ ಶಾಲೆಗಳು ಹಾಗೂ ವಸತಿ ನಿಲಯಗಳಲ್ಲಿ ಓಷಧೀಯ ಸಸ್ಯಗಳ ನೆಡುವಿಕೆ, ಯೋಗ ತರಬೇತಿ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಸೂಚಿಸಿದರು.  


ಸುದ್ದಿ ಓದಿ