ಬೆಳಗಾವಿ

ಜೈನ್ ಹೆರಿಟೇಜ್ ಶಾಲೆಯ ವಾರ್ಷಿಕೋತ್ಸವ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಜೈನ್ ಹೆರಿಟೇಜ್ ಶಾಲೆಯ ವಾರ್ಷಿಕೋತ್ಸವ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ


              ಬೆಳಗಾವಿ 17: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸ್ಪಷ್ಟ ಗುರಿ ಹೊಂದುವುದರ ಜೊತೆಗೆ ಅದನ್ನು ಸಾಧಿಸಲು ನಿರಂತರ ಪರಿಶ್ರಮ, ಶಿಸ್ತು ಮತ್ತು ಏಕಾಗ್ರತೆಯಿಂದ ಪ್ರಯತ್ನಿಸಬೇಕು ಎಂದು ಡಿವೈಎಸ್ಪಿ ಪ್ರಶಾಂತ್ ಗುರಿಸಿದ್ದ ಮುನ್ನೊಳ್ಳಿ ಕರೆ ನೀಡಿದರು.ನಗರದ ಜೈನ್ ಹೆರಿಟೇಜ್ ಶಾಲೆಯಲ್ಲಿ (ಜೆಎಚ್‌ಎಸ್) ಆಯೋಜಿಸಲಾಗಿದ್ದ 2026-27ನೇ ಸಾಲಿನ ವಾರ್ಷಿಕ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. 

            ವಿದ್ಯಾರ್ಥಿ ಜೀವನವು ಭವಿಷ್ಯದ ಸಾಧನೆಗೆ ಭದ್ರ ಬುನಾದಿಯಾಗಿದೆ. ಈ ಹಂತದಲ್ಲಿ ಸಮಯದ ಸದುಪಯೋಗ, ನಿರಂತರ ಅಧ್ಯಯನ ಹಾಗೂ ಶ್ರದ್ಧೆಯಿಂದ ತಮ್ಮ ಸಾಮರ್ಥ್ಯವನ್ನು ಗುರುತಿಸಿಕೊಂಡು ಮುನ್ನಡೆಯಬೇಕು. ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪ ಅತ್ಯಗತ್ಯ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.                                    ಸಮಾರಂಭದಲ್ಲಿ ಶಾಲೆಯ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸುವ ಮೂಲಕ ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಎತ್ತರದ ಗುರಿಗಳನ್ನು ತಲುಪಲು ಪ್ರೇರಣೆ ನೀಡಲಾಯಿತು.  ಶಾಲೆಯ ನಿರ್ದೇಶಕಿ ಶ್ರದ್ಧಾ ಖಟಾವತೆ ಉಪಸ್ಥಿತರಿದ್ದು, ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಾಧನೆಯ ಹಂಬಲ ಮತ್ತು ಆತ್ಮವಿಶ್ವಾಸ ಬೆಳೆಸುವ ಉದ್ದೇಶದಿಂದ ಸಮಾರಂಭ ಆಯೋಜಿಸಲಾಗಿತ್ತು. 


ಸುದ್ದಿ ಓದಿ