ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್ ಜೊತೆ ಜೈಶಂಕರ್ ಮಾತುಕತೆ
ವಾಷಿಂಗ್ಟನ್, ಅ 4: ಪ್ರಸ್ತುತ ಅಮೆರಿಕ ಪ್ರವಾಸದಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಅವರು ಹೊಸದಾಗಿ ನೇಮಕಗೊಂಡ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್ ಒ'ಬ್ರಿಯನ್ರನ್ನು ಗುರುವಾರ ಭೇಟಿಯಾಗಿ ಮಾತುಕತೆ ಮಾಡಿದ್ದಾರೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್ ಒ'ಬ್ರೇನ್ ಅವರನ್ನು ಭೇಟಿಯಾಗಿ ಪ್ರಮುಖ ವಿಷಯಗಳ ಬಗ್ಗೆ ಮಾತುಕತೆ ಮಾಡಿರುವುದು ಸಮಾಧಾನ ತಂದಿದೆ ಎಂದು ನಂತರ ಜೈಶಂಕರ್ ಟ್ವೀಟ್ ಮಾಡಿದ್ದಾರೆ. ಅವರೊಂದಿಗೆ ಕೆಲಸ ಮಾಡಲು ಉತ್ಸಕನಾಗಿದ್ದೇನೆ ರಾಬರ್ಟ್ ಒ 'ಬ್ರಿಯಾನ್ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಸರಕಾರದ ನಾಲ್ಕನೇ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿದ್ದಾರೆ. ಜೈಶಂಕರ್ ಅವರು ವಿದೇಶಾಂಗ ಸಚಿವ ಮೈಕ್ ಪೊಂಪಿಯೊ ಸೇರಿದಂತೆ ಅನೇಕ ಪ್ರಮುಖ ಅಧಿಕಾರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 