ಜಮಖಂಡಿ

ಜಮಖಂಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಸಂಗಮೇಶ ಮಟೋಳಿ ಆಯ್ಕೆ

ಜಮಖಂಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಸಂಗಮೇಶ ಮಟೋಳಿ ಆಯ್ಕೆ

ಲೋಕದರ್ಶನ ವರದಿ 

ಜಮಖಂಡಿ ಸೆ.25: ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ, ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ. ಸಂಗಮೇಶ ಮಟೋಳಿ ಅವರನ್ನು ಆಯ್ಕೆ ಮಾಡಲಾಗಿದೆ.  

ಈ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಅವರು ಡಾ. ಸಂಗಮೇಶ ಮಟೋಳಿ ಅವರನ್ನು ಸನ್ಮಾನಿಸಿದರು.  

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ, ಜಿಲ್ಲಾ ಹಾಗೂ ಜಮಖಂಡಿ ತಾಲೂಕು ಘಟಕಗಳ ಆಶ್ರಯದಲ್ಲಿ ಅ.4ರಂದು ನಗರದ ಬಸವ ಭವನದಲ್ಲಿ ಒಂದು ದಿನದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.  ಕಾರ್ಯಕ್ರಮದಲ್ಲಿ ಕಸಾಪ ತಾಲೂಕು ಘಟಕದ ಅಧ್ಯಕ್ಷ ಸಂತೋಷ ತಳಕೇರಿ, ಸಲಹಾ ಸಮಿತಿ ಸದಸ್ಯ ಡಾ. ಟಿ.ಪಿ. ಗಿರಡ್ಡಿ ಹಾಗೂ ಗೌರವ ಕಾರ್ಯದರ್ಶಿ ಪ್ರಭು ಹಿಡಕಲ್ ಉಪಸ್ಥಿತರಿದ್ದರು. 


ಸುದ್ದಿ ಓದಿ