ಜನಸ್ಪಂದನ: ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಲಕ್ಷ್ಮೀ ಹೆಬ್ಬಾಳಕರ್
Janaspandan: Lakshmi Hebbalkar listened to the public's concerns at the Home Office
ಬೆಳಗಾವಿ 07 : ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳು ಮತ್ತು ಸಮಸ್ಯೆಗಳನ್ನು ಆಲಿಸಿದರು. ವಿವಿಧ ಗ್ರಾಮಗಳು ಹಾಗೂ ನಗರದ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಜನರು ತಮ್ಮ ವೈಯಕ್ತಿಕ, ಸಾಮಾಜಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳನ್ನು ಗಮನಕ್ಕೆ ತಂದರು. ಜನರು ಸಲ್ಲಿಸಿದ ಅಹವಾಲುಗಳನ್ನು ಆಲಿಸಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ಕೇವಲ ಸಾಂತ್ವನ ಹೇಳುವುದಕ್ಕಷ್ಟೇ ಸೀಮಿತವಾಗದೆ, ಹಲವು ಪ್ರಕರಣಗಳಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ದೂರವಾಣಿ ಮೂಲಕ ಮಾತನಾಡಿ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸರ್ಕಾರಿ ಯೋಜನೆಗಳ ಅನುಷ್ಠಾನ, ಮೂಲಸೌಕರ್ಯ ಅಭಿವೃದ್ಧಿ, ಕಂದಾಯ ಇಲಾಖೆ, ಪಿಂಚಣಿ, ಕುಡಿಯುವ ನೀರು, ರಸ್ತೆ, ಆರೋಗ್ಯ ಹಾಗೂ ಇತರೆ ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳ ಕುರಿತು ಜನರು ಮನವಿ ಸಲ್ಲಿಸಿದರು. ಗೃಹ ಕಚೇರಿಯಲ್ಲಿ ನಡೆದ ಜನಸಂಪರ್ಕ ಕಾರ್ಯಕ್ರಮದಲ್ಲಿ ನೂರಾರು ಜನರು ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮನವಿ ಸಲ್ಲಿಸಿದರು. ಹಲವಾರು ಪ್ರಕರಣಗಳಲ್ಲಿ ತಕ್ಷಣವೇ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮ ಕೈಗೊಳ್ಳಲಾಯಿತು. ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಾರ್ವಜನಿಕ ಸೇವೆಗೆ ಬದ್ಧತೆಯನ್ನು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಂದಿನಂತೆ ಪ್ರದರ್ಶಿಸಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 