ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಘೋಷವಾಕ್ಯದಡಿ ಜಾಥಾ ಕಾರ್ಯಕ್ರಮ
Jatha program under the slogan 'Yoga for healthy old age'
ಗದಗ 20: ಯೋಗ ಎಂಬುದು ಕೇವಲ ದೈಹಿಕ ಕಸರತ್ತು ಅಥವಾ ವ್ಯಾಯಾಮವಲ್ಲ ಅದೊಂದು ಮಹಾನ್ ವಿಜ್ಞಾನ ಹಾಗೂ ಶಾಸ್ತ್ರವಾಗಿದೆ. ಆರೋಗ್ಯ ರಕ್ಷಣೆ ಮತ್ತು ದೀರ್ಘಾಯುಷ್ಯಕ್ಕೆ ಪ್ರತಿಯೊಬ್ಬರೂ ನಿತ್ಯ ಯೋಗಾಭ್ಯಾಸ ಮಾಡುವುದು ಅತ್ಯಗತ್ಯ ನಮ್ಮ ದೇಶದ ಶ್ರೇಷ್ಠ ಋಷಿಮುನಿಗಳು, ವಿಶೇಷವಾಗಿ ಪತಂಜಲಿ ಮಹರ್ಷಿಗಳು ಜಗತ್ತಿಗೆ ನೀಡಿದ ಈ ಅಮೂಲ್ಯ ಕೊಡುಗೆಯನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ನಿರಂತರವಾಗಿ ಅಳವಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಶಾಸಕ ಎಸ್.ವ್ಹಿ. ಸಂಕನೂರು ತಿಳಿಸಿದರು. ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲೆಯ ವಿವಿಧ ಇಲಾಖೆಗಳು ಮತ್ತು ಸರ್ವಯೋಗ ಸಂಸ್ಥೆಗಳ ಇವರುಗಳ ಸಹಯೋಗದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ 2026 “ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಕುರಿತು ಆಟೋ ಮೂಲಕ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಶನಿವಾರ ಜೂನ್ (20) ರಂದು ಹಮ್ಮಿಕೊಂಡಿದ್ದ 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ವಿಧಾನ ಪರಿಷತ್ ಶಾಸಕ ಎಸ್. ವ್ಹಿ. ಸಂಕನೂರು ಚಾಲನೆ ನೀಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 