ಬೆಳಗಾವಿಯ ಹೃದಯ‌ಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು

ಬೆಳಗಾವಿಯ ಹೃದಯ‌ಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು Jewelry shop looted in the heart of Belagavi; police rush to the scene.

ಬೆಳಗಾವಿ : ನಗರದ ಹೃದಯಭಾಗದ  ಚಿನ್ನಾಭರಣ ಅಂಗಡಿಯೊಂದರಲ್ಲಿ ಚಿನ್ನಾಭರಣ ಲೂಟಿ ಮಾಡಿರುವ ಘಟನೆಯೊಂದು ಖಡೇಬಜಾರ ಪೊಲೀಸ್ ಠಾಣೆ ವ್ಯಾಪ್ತಿಯ ಗಣಪತಿ ಗಲ್ಲಿಯಲ್ಲಿ ನಡೆದಿರುವದು ವರದಿಯಾಗಿದೆ.

ಲಭ್ಯ ಮಾಹಿತಿಯಂತೆ, ಮಧ್ಯರಾತ್ರಿ  ವಾಹನದಲ್ಲಿ ಬಂದ ದುಷ್ಕರ್ಮಿಗಳು ಅಂಗಡಿಯ ಬೀಗ ಒಡೆಯಲು ಪ್ರಯತ್ನಿಸಿದ್ದಾರೆ. ಬಳಿಕ ಸುಮಾರು ಎರಡು ಗಂಟೆಗಳ ನಂತರ ಮತ್ತೊಂದು ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ಅಂಗಡಿಯೊಳಗಿನ ಕೆಲವು ವಸ್ತುಗಳನ್ನು ತೆಗೆದುಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.

 ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಖಡೇಬಜಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ. ಘಟನಾ ಸ್ಥಳಕ್ಕೆ ಶ್ವಾನ್ ದಳ ಹಾಗೂ ಬೆರಳಚ್ಚು ತಜ್ಞರ ತಂಡವನ್ನು ಕರೆತರಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ನಂತರವೇ ಸ್ಪಷ್ಟವಾಗಲಿದೆ.


.