ಜೂ.18ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ
ಮುಂಡಗೋಡ:ಸರ್ಕಾರದ ನಿರ್ದೇಶನದಂತೆ ತಿಂಗಳ ಪ್ರತಿ 3ನೇ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ತಾಲೂಕಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ ಶ್ರೀಧರ ಮುಂದಲಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ.18ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ನಿಮಿತ್ತ ಜಿಲ್ಲಾಧಿಕಾರಿಗಳು ಮುಂಡಗೋಡ ತಾಲೂಕಿನ ಪಾಳಾ ಹೋಬಳಿಯ ಮಳಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಮಳಗಿ ಗ್ರಾಮಕ್ಕೆ ಭೇಟಿ ನೀಡುವವರಿದ್ದು ಎಲ್ಲಾ ಗ್ರಾಮಸ್ಥರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.