ಜಿಂದಾಲ್ ನಿಂದ ಶಾಲಾ ವಿದ್ಯಾರ್ಥಿಗಳಿಗೆ ಶೌಚಾಲಯ ನಿರ್ಮಾಣ
Jindal builds toilets for school students
ಬಳ್ಳಾರಿ 16: ಜೆ ಎಸ್ ಡಬ್ಲ್ಯೂ ಪೇಂಟ್ಸ್ ಮತ್ತು ಜೆ ಎಸ್ ಡಬ್ಲ್ಯೂ ಫೌಂಡೇಶನ್ ಸಹಯೋಗ ದಲ್ಲಿ ಕಾಪೋರೇಟ್ ಸಾಮಾಜಿಕ ಜವಾಬ್ದಾರಿಯವ ಡಿ ಶೈಕ್ಷಣಿಕ ಅಭಿವೃದ್ಧಿ ಕಾರ್ಯಕ್ರಮಗಳ ಅಡಿಯಲ್ಲಿ, ಸಂಡೂರು ತಾಲೂಕಿನ ತೋರಣಗಲ್ಲು ಅಂಕಾಳಮ್ಮ ವಾರ್ಡ್ ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಶೌಚಾಲಯ ನಿರ್ಮಾಣ ಮಾಡಲಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಉದ್ಘಾಟನೆ ಮಾಡಿ ಮಾತನಾಡಿದ ಜೆ ಎಸ್ ಡಬ್ಲ್ಯೂ ಸ್ಟೀಲ್ ಲಿಮಿಟೆಡ್ ನ ಹಿರಿಯ ಉಪಾಧ್ಯಕ್ಷ ಸುನಿಲ್ ರಾಲ್ಫ್ "ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಶೌಚಾಲಯ ನಿರ್ಮಿಸಿದ್ದು ಶಾಲಾ ಆಡಳಿತ ಮತ್ತು ಎಸ್ ಡಿ ಎಂ ಸಿ ಸದಸ್ಯರು ನಿರ್ವಹಣೆ ಮಾಡಿಕೊಂಡು ಉತ್ತಮ ಶಿಕ್ಷಣ ಒದಗಿಸುವಲ್ಲಿ ಸಹಕರಿಸಬೇಕೆಂದರು. ಶಾಲಾ ಮುಖ್ಯ ಶಿಕ್ಷಕ ಬಂದೇನವಾಜ್ ಮಾತನಾಡಿ " ಪ್ರಸ್ತುತ 600 ಕ್ಕೂ ಅಧಿಕ ವಿದ್ಯಾರ್ಥಿಗಳು ಕಲಿಯುತ್ತಿದ್ದು ಶೌಚಾಲಯ ನಿರ್ಮಾಣದಿಂದ ವಿದ್ಯಾರ್ಥಿಗಳು ಆವರಣ ಬಿಟ್ಟು ಹೋಗುವುದು ತಪ್ಪುತ್ತದೆ ಮತ್ತು ವಿಶೇಷವಾಗಿ ಹೆಣ್ಣು ಮಕ್ಕಳ ಸ್ವಚ್ಛತೆ ಹಾಗೂ ಸುರಕ್ಷತೆಗೆ ಅನುಕೂಲವಾಗಲಿದೆ" ಎಂದರು.
ಈ ಕಾರ್ಯಕ್ರಮದಲ್ಲಿ ಜೆ ಎಸ್ ಡಬ್ಲ್ಯೂ ಫೌಂಡೇಶನ್ ದಕ್ಷಿಣ ವಲಯ ಮುಖ್ಯಸ್ಥ ಪೆದ್ದಣ್ಣ ಬೀಡಲಾ, ಶ್ರೀನಿವಾಸ್ ರಾವ್, ಭವಾನಿ ಸಿಂಗ್ ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷ ಭಗವಂತಪ್ಪ, ವಾರ್ಡ್ ಸದಸ್ಯ ಪುಲಿಕೊಂಡ ಹಾಗು ಮದೀನ ಕಂಟ್ರಾಕ್ಟರ್ ಶುಭಾನ್ ಭಾಷಾ ಮತ್ತು ಶಿಕ್ಷಕರು ಹಾಗು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 