ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ
Job Card Mela Launched
ಶಿರಹಟ್ಟಿ 21: ಗ್ರಾಮೀಣ ಕುಟುಂಬಗಳಿಗೆ ಸ್ವಗ್ರಾಮದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ತಾಲ್ಲೂಕಿನಾದ್ಯಂತ ಆಗಸ್ಟ್ 15ರಿಂದ ಸೆಪ್ಟೆಂಬರ್ 15ರವರೆಗೆ ಜಾಬ್ ಕಾರ್ಡ್ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಅಭಿಯಾನದ ಅಂಗವಾಗಿ ಕಡಕೋಳ, ರಣತುರ ಹಾಗೂ ಮಜ್ಜೂರು ಗ್ರಾಮಗಳಲ್ಲಿ ಜಾಬ್ ಕಾರ್ಡ್ ಮೇಳ ನಡೆಸಲಾಯಿತು. ಗ್ರಾಮೀಣ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವುದು ಹಾಗೂ ಹೆಚ್ಚಿನ ಮಾನವ ದಿನಗಳ ಸೃಷ್ಟಿಗೆ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಇದರ ಉದ್ದೇಶವಾಗಿದೆ.
ಅಭಿಯಾನದಡಿ ಮನೆ ಮನೆಗೆ ಭೇಟಿ ನೀಡಿ ಅರ್ಹರಿಗೆ ಹೊಸ ಜಾಬ್ ಕಾರ್ಡ್ ಮಾಡಿಸುವುದು, ಹಳೆಯ ಕಾರ್ಡ್ ನವೀಕರಣ, ಇ-ಕೆವೈಸಿ ಪೂರ್ಣಗೊಳಿಸುವುದು ಹಾಗೂ ಉದ್ಯೋಗದ ಬೇಡಿಕೆ ಸ್ವೀಕರಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ. ಕಾರ್ಮಿಕರ ಹಾಜರಾತಿ, ಕಾಮಗಾರಿಗಳ ಪ್ರಗತಿ ಮತ್ತು ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಯಲ್ಲಿ ನಿರ್ವಹಿಸಲಾಗುತ್ತಿದೆ.
ಮಾಹಿತಿ ಶಿಕ್ಷಣ ಸಂಯೋಜಕ ವೀರೇಶ್ ಮಾತನಾಡಿ, ನಿಷ್ಕ್ರಿಯ ಜಾಬ್ ಕಾರ್ಡ್ ಹೊಂದಿರುವ ಕುಟುಂಬಗಳನ್ನು ಗುರುತಿಸಿ, ಯೋಜನೆಯಡಿ ಲಭ್ಯವಿರುವ ಅಕುಶಲ ಉದ್ಯೋಗ ಹಾಗೂ ವೈಯಕ್ತಿಕ ಸವಲತ್ತುಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಜಲ ಸಂರಕ್ಷಣೆ, ಅಂತರ್ಜಲ ಮರುಪೂರಣ ಹಾಗೂ ದೀರ್ಘಕಾಲೀನ ಜೀವನೋಪಾಯಕ್ಕೆ ನೆರವಾಗುವ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು ಎಂದರು.
ಜಾಬ್ ಕಾರ್ಡ, ಇ-ಕೆವೈಸಿ ಹಾಗೂ ಉದ್ಯೋಗದ ಬೇಡಿಕೆ ಸಲ್ಲಿಕೆ ಕುರಿತು ಮಾಹಿತಿಗಾಗಿ ಸಾರ್ವಜನಿಕರು ತಮ್ಮ ಗ್ರಾಮ ಪಂಚಾಯಿತಿ ಕಾರ್ಯಾಲಯವನ್ನು ಸಂಪರ್ಕಿಸುವಂತೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ತಾಂತ್ರಿಕ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 