ಉದ್ಯೋಗ ಮೇಳ: ಜಿಲ್ಲಾಧಿಕಾರಿಗಳಿಂದ ವೆಬ್ಸೈಟ್ ಅನಾವರಣ
ಕೊಪ್ಪಳ 27: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ವತಿಯಿಂದ ಕೊಪ್ಪಳದಲ್ಲಿ ''ಜಿಲ್ಲಾ ಮಟ್ಟದ ಉದ್ಯೋಗ ಮೇಳ-2020'' ಅನ್ನು ಆಯೋಜಿಸಲು ಉದ್ದೇಶಿದ್ದು, ಇದರ ಅಂಗವಾಗಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ತಮ್ಮ ಕಚೇರಿಯಲ್ಲಿ ಇಂದು(ಫೆ.27) ಅಧಿಕೃತ ವೆಬ್ಸೈಟ್ ಅನಾವರಣಗೊಳಿಸಿದರು. ಉದ್ಯೋಗ ಮೇಳಕ್ಕೆ ಆಸಕ್ತಿವುಳ್ಳ ಕೊಪ್ಪಳ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ವೆಬ್ಸೈಟ್ ಣಣಠಿ://ಞಠಠಿಠಿಚಿಟ.ಟಿಛಿ.ಟಿ/ ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಎನ್.ಐ.ಸಿ ಅಧಿಕಾರಿಗಳಾದ ಈರಣ್ಣ ಏಳುಭಾವಿ, ಬಸವರಾಜ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿ, ಅಭಿಯಾನ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 