ಆಗಸ್ಟ್‌ 15ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಬ್ ಕಾರ್ಡ್‌ ಮೇಳ

ಆಗಸ್ಟ್‌ 15ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಬ್ ಕಾರ್ಡ್‌ ಮೇಳ  Job card mela at the Gram Panchayat level across the state from August 15

ಶಿರಹಟ್ಟಿ, ಆ.13: ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಅಭಿವೃದ್ಧಿಪಡಿಸಲಾದ ವಿಕಸಿತ ್ಣ್ಘೌಿಹಿಉ ಖಂಒ ಉ ಯೋಜನೆಯಡಿ ಶಿರಹಟ್ಟಿ ತಾಲೂಕಿನಲ್ಲಿ ಜಾಬ್ ಕಾರ್ಡ್‌ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನವನ್ನು ಆಗಸ್ಟ್‌ 15ರಿಂದ ಹಮ್ಮಿಕೊಳ್ಳಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ತಿಳಿಸಿದ್ದಾರೆ.  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ)ಯ ಮುಂದುವರಿದ ಅಥವಾ ಪರ್ಯಾಯ ಆವೃತ್ತಿಯಾಗಿ ಕಾಣುತ್ತಿರುವ ಈ ಯೋಜನೆಯು ಗ್ರಾಮೀಣ ಕಾರ್ಮಿಕರಲ್ಲಿ ಹೊಸ ಭರವಸೆ ಮೂಡಿಸಿದೆ. ಈ ಹಿಂದೆ ಜಿಲ್ಲೆಯಲ್ಲಿ ಜಾರಿಯಲ್ಲಿದ್ದ ಮನರೇಗಾ ಯೋಜನೆಯಡಿ ದಾಖಲೆ ಪ್ರಮಾಣದಲ್ಲಿ ಮಾನವ ದಿನಗಳ ಸೃಷ್ಟಿಯಾಗಿತ್ತು.  

ಹೊಸದಾಗಿ ಉದ್ಯೋಗ ಬಯಸುವ ಅರ್ಹ ಗ್ರಾಮೀಣ ಕುಟುಂಬಗಳಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ವಿಶೇಷ ಚೇತನರು, ಮಹಿಳಾ ನೇತೃತ್ವದ ಕುಟುಂಬಗಳು, ಭೂರಹಿತ ಕೂಲಿ ಕಾರ್ಮಿಕರು ಸೇರಿದಂತೆ ಎಲ್ಲ ಅರ್ಹರಿಗೆ ತ್ವರಿತವಾಗಿ ಜಾಬ್ ಕಾರ್ಡ್‌ ನೀಡುವ ಉದ್ದೇಶದಿಂದ ಆಗಸ್ಟ್‌ 15ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಬ್ ಕಾರ್ಡ್‌ ಮೇಳ ಆಯೋಜಿಸಲಾಗುತ್ತಿದೆ. ಶಿರಹಟ್ಟಿ ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿಯೂ ಮೇಳಗಳನ್ನು ನಡೆಸಿ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಮಾನವ ದಿನಗಳ ಸೃಷ್ಟಿಗೆ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಅವರು ಹೇಳಿದರು.  

ಜಾಬ್ ಕಾರ್ಡ್‌ ಹೊಂದಿರುವ ಕುಟುಂಬಗಳ ಮಾಹಿತಿಯನ್ನು ಪರೀಶೀಲಿಸುವುದು, ಅಗತ್ಯವಿರುವವರಿಗೆ ಹೊಸ ಜಾಬ್ ಕಾರ್ಡ್‌ ಮಾಡಿಸಿಕೊಡುವುದು, ಜಾಬ್ ಕಾರ್ಡ್‌ ನವೀಕರಣ ಹಾಗೂ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವುದು ಮತ್ತು ಉದ್ಯೋಗದ ಬೇಡಿಕೆಗಳನ್ನು ಸ್ವೀಕರಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗುವುದು.  ಕೆಲಸಕ್ಕಾಗಿ ಅರ್ಜಿ ಸಲ್ಲಿಸುವ ಕುಟುಂಬಗಳಿಗೆ ನಿಯಮಾನುಸಾರ ಸ್ವೀಕೃತಿ ನೀಡುವ ವ್ಯವಸ್ಥೆಯನ್ನು ಗ್ರಾಮ ಪಂಚಾಯಿತಿಗಳಲ್ಲಿ ಮಾಡಲಾಗುತ್ತಿದೆ. ಮನೆ-ಮನೆ ಭೇಟಿ ಮೂಲಕ ಸಾರ್ವಜನಿಕರಿಗೆ ಯೋಜನೆಯ ಕುರಿತು ಮಾಹಿತಿ ನೀಡುವುದು, ಗ್ರಾಮಮಟ್ಟದಲ್ಲಿ ಸಭೆ ನಡೆಸುವುದು, ಪೋಸ್ಟರ್ ಹಾಗೂ ಬ್ಯಾನರ್ಗಳ ಮೂಲಕ ಜಾಗೃತಿ ಮೂಡಿಸುವುದು ಮತ್ತು ಜಾಬ್ ಕಾರ್ಡ್‌ ಮೇಳದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಸೂಚಿಸಲಾಗಿದೆ.  

ಯೋಜನೆಯ ಪ್ರಯೋಜನ ಪಡೆಯಲು ಅಗತ್ಯ ದಾಖಲೆಗಳೊಂದಿಗೆ ತಮ್ಮ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸುವಂತೆ ಗ್ರಾಮೀಣ ಜನರಿಗೆ ತಿಳಿಸಲಾಗಿದೆ. ಕಾರ್ಮಿಕರ ಹಾಜರಾತಿ, ಕಾಮಗಾರಿಗಳ ಪ್ರಗತಿ ಹಾಗೂ ಸಂಬಂಧಿತ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಯ ಮೂಲಕ ನಿರ್ವಹಿಸುವುದಕ್ಕೂ ಒತ್ತು ನೀಡಲಾಗಿದೆ.  ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂಬಂಧಿತ ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಿ ಅರ್ಹ ಕುಟುಂಬಗಳಿಗೆ ಯೋಜನೆಯ ಸೌಲಭ್ಯ ತಲುಪಿಸುವ ಕ್ರಮ ಕೈಗೊಳ್ಳುತ್ತಿದ್ದಾರೆ.

“ಉದ್ಯೋಗದ ಅವಕಾಶವನ್ನು ಅರ್ಹ ಕುಟುಂಬಗಳ ಮನೆಬಾಗಿಲಿಗೆ ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಜಾಬ್ ಕಾರ್ಡ, ಇ-ಕೆವೈಸಿ ಹಾಗೂ ಉದ್ಯೋಗದ ಬೇಡಿಕೆ ಸಲ್ಲಿಕೆ ಸೇರಿದಂತೆ ಯಾವುದೇ ಮಾಹಿತಿ ಅಗತ್ಯವಿದ್ದರೂ ಸಾರ್ವಜನಿಕರು ತಮ್ಮ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಬೇಕು. ಯೋಜನೆಯ ಅನುಷ್ಠಾನದಲ್ಲಿ ಜನರ ಸಹಕಾರ ಅತ್ಯಂತ ಮುಖ್ಯ” ಎಂದು ರಾಮಣ್ಣ ದೊಡ್ಡಮನಿ ತಿಳಿಸಿದ್ದಾರೆ.  ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಅಭಿಯಾನಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದ್ದು, ಗ್ರಾಮೀಣ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗ ಒದಗಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಅವರು ಕರೆ ನೀಡಿದ್ದಾರೆ.