ಸೆ.15ರವರೆಗೆ ತಾಲೂಕಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಜಾಬ್ ಕಾರ್ಡ್ ಮೇಳ
ಸವದತ್ತಿ, ಆ.25: ಅಭಿವೃದ್ಧಿ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಯಡಿ ತಾಲೂಕಿನಾದ್ಯಂತ ಜಾಬ್ ಕಾರ್ಡ್ ಮೇಳವನ್ನು ಆಯೋಜಿಸಲಾಗಿದೆ.
ಗ್ರಾಮೀಣ ಭಾಗದ ಅರ್ಹ ಕೂಲಿಕಾರರಿಗೆ ಉದ್ಯೋಗ ಖಾತ್ರಿ ಕಲ್ಪಿಸುವ ಉದ್ದೇಶದಿಂದ ಈ ಮೇಳದ ಮೂಲಕ ಹೊಸ ಜಾಬ್ ಕಾರ್ಡ್ಗಳನ್ನು ವಿತರಿಸಲಾಗುತ್ತಿದ್ದು, ನಿಷ್ಕ್ರಿಯವಾಗಿರುವ ಜಾಬ್ ಕಾರ್ಡ್ಗಳನ್ನು ಸಕ್ರಿಯಗೊಳಿಸಲಾಗುತ್ತಿದೆ. ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 15ರವರೆಗೆ ಮೇಳ ನಡೆಯಲಿದೆ.
ಅರ್ಹ ಕೂಲಿಕಾರರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಅಯ್ಯನಗೌಡ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯೋಜನೆಯಡಿ ಕೂಲಿ ಕೆಲಸ ಒದಗಿಸಲಾಗುವುದು. ಒಂದು ಮಾನವ ದಿನಕ್ಕೆ ?382ರಂತೆ ಕೂಲಿ ನೀಡಲಾಗುತ್ತಿದ್ದು, ಸಮಾನ ಕೆಲಸಕ್ಕೆ ಸಮಾನ ವೇತನ ಕಲ್ಪಿಸಲಾಗಿದೆ. ಪ್ರತಿ ಕುಟುಂಬಕ್ಕೆ ವಾರ್ಷಿಕ 100ರಿಂದ 125 ಮಾನವ ದಿನಗಳವರೆಗೆ ಉದ್ಯೋಗಾವಕಾಶ ದೊರೆಯಲಿದೆ.
ಕೂಲಿಕಾರರು ಉದ್ಯೋಗಕ್ಕಾಗಿ ಗುಳೆ ಹೋಗುವುದನ್ನು ತಡೆದು, ಸ್ವಗ್ರಾಮದಲ್ಲಿಯೇ ಉದ್ಯೋಗ ಪಡೆಯಲು ಈ ಮೇಳ ಉತ್ತಮ ಅವಕಾಶವಾಗಿದೆ. ಅರ್ಹರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಆಯಾ ಸ್ಥಳೀಯ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.