ಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿ: ವಿಠ್ಠಲ ಕಟಕಧೊಂಡ

ಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿ: ವಿಠ್ಠಲ ಕಟಕಧೊಂಡ Join hands for development in the democratic system: Vitthal Katakadhond

 

ಚಡಚಣ, ಸೆ.19: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ ಕಟಕಧೊಂಡ ಹೇಳಿದರು.  ತಾಲೂಕಿನ ಹಲಸಂಗಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಶನಿವಾರ ನಡೆದ ‘ಪ್ರಜಾಸೇವಾ ಅಭಿಯಾನ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಸರ್ಕಾರದ ಪ್ರಜಾಸೇವಾ ಅಭಿಯಾನವು ಮುಖ್ಯಮಂತ್ರಿ ಅವರ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು, ಗ್ರಾಮೀಣ ಪ್ರದೇಶದ ಜನರ ಬಳಿಗೆ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತೆರಳಿ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು ಉತ್ತಮ ವೇದಿಕೆಯಾಗಿದೆ. ಸರ್ಕಾರ ವಿಧಾನಸೌಧಕ್ಕೆ ಮಾತ್ರ ಸೀಮಿತವಾಗಿರದೆ, ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಜನರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕು. ತಮ್ಮ ಅವಧಿಯಲ್ಲಿ ಜನರಿಗಾಗಿ ಕೈಗೊಂಡ ಕೆಲಸಗಳ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.  

ತಾಪಂ ಇಒ ಅಶೋಕಕುಮಾರ ರಾಠೋಡ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ಚಡಚಣ ತಾಲೂಕಿನಲ್ಲಿ ಎರಡನೇ ಹಂತವಾಗಿ ಹಲಸಂಗಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಕಾರ್ಯಕ್ರಮ ನಡೆಸಲಾಗುತ್ತಿದೆ. ಸಾರ್ವಜನಿಕರಿಂದ ಸ್ವೀಕರಿಸಲಾದ ಅರ್ಜಿಗಳನ್ನು ಪರೀಶೀಲಿಸಿ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.