ಶೈಕ್ಷಣಿಕ ಪ್ರಗತಿಗೆ ಕೈಜೋಡಿಸಿ - ಮಹೇಶ್ ವಿ ಪೂಜಾರ
Join hands for educational progress - Mahesh V. Pujara
ಶೈಕ್ಷಣಿಕ ಪ್ರಗತಿಗೆ ಕೈಜೋಡಿಸಿ - ಮಹೇಶ್ ವಿ ಪೂಜಾರ
ಲೋಕದರ್ಶನ ವರದಿ
ಹೂವಿನ ಹಡಗಲಿ 15 : ಸರ್ಕಾರ ವಿವಿಧ ಯೋಜನೆಗಳ ಅನುಷ್ಠಾನ ತರುವ ಮೂಲಕ ಶೈಕ್ಷಣಿಕ ಪ್ರಗತಿಗೆ ದಾಪುಗಾಲು ಹಾಕುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಗುಡೇಕೋಟೆ ಕರಿಬಸಪ್ಪ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಉತ್ತಂಗಿಯಲ್ಲಿ ಶುಕ್ರವಾರ ಪೋಷಕ- ಶಿಕ್ಷಕರ ಮಹಾಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಸರ್ಕಾರ ಉಚಿತ ಪಠ್ಯ ಪುಸ್ತಕ ಸಮವಸ್ತ್ರ ಬಿಸಿಯೂಟ ಮೊಟ್ಟೆ ಬಾಳೇಹಣ್ಣು ಸೇರಿದಂತೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಯೋಜನೆ ರೂಪಿಸಿ ಜಾರಿಗೆ ತರಲಾಗುತ್ತಿದೆ ಎಂದರು. ಎಸ್. ಡಿ. ಎಂ ಸಿ ಅಧ್ಯಕ್ಷ ಎಸ್ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು.ಶಾಲೆಯ ಮುಖ್ಯ ಗುರುಗಳಾದ ಎಲ್. ಟಿ. ನಾಯಕ್ ಎಸ್ ಡಿ ಎಮ್ ಸಿ ಸದಸ್ಯರಾದ ಎಂ ಮಂಜುನಾಥ್, ಕೆ ಪ್ರಭು, ಬಿ ಚಂದ್ರಶೇಖರ್ ಬಾಚೇನಹಳ್ಳಿ ಕೊಟ್ರೇಶ್ ,ಎನ್‌ಎಂ ಚೆನ್ನಯ್ಯ ,ಎಸ್‌ಎಂ ರೂಪ ಪ್ರೇಮ ಲೀಲಾ ಏ. ಕವಿತಾ ಕಾಟ್ರಹಳ್ಳಿ. ಕವಿತಾ ,ಬಸಮ್ಮ ಕಾಳಮ್ಮ ಇದ್ದರು. ಎಸ್. ಷಣ್ಮುಖ , ಪ್ರಭುಗೌಡ ವೀರಭದ್ರಯ್ಯ ಟಿ ಎಂನಿರ್ವಹಿಸಿದರು.ಗ್ರಾಮದ ಪಾಲಕರು ಪೋಷಕರು ಶಾಲಾ ಶಿಕ್ಷಕ ವೃಂದ ಹಾಗೂ ಅತಿಥಿ ಶಿಕ್ಷಕರು ಶಿಕ್ಷಣ ಪ್ರೇಮಿಗಳು ಸ್ಥಳೀಯ ಸಂಘ ಸಂಸ್ಥೆಯ ಪದಾಧಿಕಾರಿಗಳು ಹಳೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅಕ್ಷರ ದಾಸೋಹ ಯೋಜನೆ ಅಡಿಯಲ್ಲಿ ಸಿಹಿ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 