ಬಾಲ ಕಾರ್ಮಿಕ ನಿರ್ಮೂಲನೆಗೆ ಕೈಜೋಡಿಸಿ : ನ್ಯಾಯಾಧೀಶ ಹರೀಶ.ಎ

ಬಾಲ ಕಾರ್ಮಿಕ ನಿರ್ಮೂಲನೆಗೆ ಕೈಜೋಡಿಸಿ : ನ್ಯಾಯಾಧೀಶ ಹರೀಶ.ಎ Join hands to eradicate child labor: Judge Harish A.

ಲೋಕದರ್ಶನ ವರದಿ 

ವಿಜಯಪುರ 12 : ಸಮಾಜದಲ್ಲಿನ ಅನಿಷ್ಠ ಪಿಡುಗಾಗಿರುವ ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಕೈಜೋಡಿಸಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ ಎ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಹಯೋಗದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಚರಿಸಲಾದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಾಲಕಾರ್ಮಿಕ ಪದ್ಧತಿ ಮತ್ತು ಬಾಲ್ಯ ವಿವಾಹದ ಕುರಿತು ಜನರಲ್ಲಿ ಸೂಕ್ತ ತಿಳುವಳಿಕೆ ಹಾಗೂ ಕಾನೂನಿನ ಜಾಗೃತಿ ಹೊಂದುವುದು ಅಗತ್ಯವಾವಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಮಕ್ಕಳ ಹಕ್ಕುಗಳ ಕುರಿತಾಗಿ ಸೂಕ್ತ ಅರಿವು ಮೂಡಿಸಬೇಕು. ಈ ಬಗ್ಗೆ ಜಾಗೃತಿ ಹಾಗೂ ಸಹಕಾರ ನೀಡಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಾ ಸಿದ್ಧವಾಗಿದೆ ಎಂದು ಹೇಳಿದರು. ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಇರುವ ಕಾನೂನಾತ್ಮಕ ಕ್ರಮಗಳ ಕುರಿತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಎಸ್ ಹಾಗರಗಿ ಅವರು ತಿಳಿಸಿದರು.  

ಬಾಲಕಾರ್ಮಿಕ ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರನ್ವಯ ಪ್ರತಿ ತಿಂಗಳು ವಿವಿಧ ಇಲಾಖೆಗಳ ಅಧಿಕಾರಿಗಳ ತಂಡದೊಂದಿಗೆ ಅನೀರೀಕ್ಷಿತ ದಾಳಿ  ಕೈಗೊಂಡು ಮಕ್ಕಳನ್ನು ರಕ್ಷಿಸಿ ಪ್ರಕರಣ ದಾಖಲಿಸಿ ತಪ್ಪಿತಸ್ಥ ಮಾಲೀಕರಿಂದ ಕಾರ​‍್ಪಸ ನಿಧಿ ವಸೂಲಿ ಮಾಡಲು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲ ಇಲಾಖೆಗಳ ಸಹಕಾರದ ಅಗತ್ಯವಿದೆ ಎಂದು ಇಲಾಖೆಯ ಕಾರ್ಯವೈಖರಿಯೊಂದಿಗೆ ಬಾಲಕಾರ್ಮಿಕ ಪದ್ಧತಿಯನ್ನು ತೊಡೆದು ಹಾಕಲು ಎಲ್ಲ ಇಲಾಖೆಗಳ ಹಾಗೂ ಸಾರ್ವಜನಿಕರ ಸಹಕಾರದ ಅಗತ್ಯವಿದೆ.

ಕಾರ್ಮಿಕ ಅಧಿಕಾರಿಗಳಾದ ರಮೇಶ ಎಸ್ ಸುಂಬಡ ಪ್ರಾಸ್ತಾವಿಕ ನುಡಿ ನುಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಿರ್ಮಲಾ ಎಚ್ ಸುರಪುರ ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹದಂತಹ ಪ್ರಕರಣಗಳು ಕಂಡು ಬಂದಲ್ಲಿ 1098  ಕರೆ ಮಾಡಬೇಕು. ಎಲ್ಲಾ ಮಕ್ಕಳು ಶಿಕ್ಷಣ ಪಡೆಯುವುದು ಅವರ ಹಕ್ಕಾಗಿದೆ. ಮಕ್ಕಳಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಎದುರಾದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಬೇಕೆಂದು   ಹೇಳಿದರು. ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಯ ಕುರಿತು ಫಾದರ್ ಸುಮನ್ ಬಾಲು ಅವರು ಉಪನ್ಯಾಸ ನೀಡಿದರು.