ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ: ರಾಠೋಡ
Join hands to eradicate child labour: Rathod
ಇಂಡಿ 12: ತಾಲೂಕು ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಇಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಹಾಗೂ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ನಂತರ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಂದೀಪ್ ಠಾಡೋಡ ಅವರು ಬಾಲ ಕಾರ್ಮಿಕ ಪದ್ಧತಿಯು ಸಾಮಾಜಿಕ ಪಿಡುಗಾಗಿದ್ದು, ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿ ಮಾಡದೇ ಶಿಕ್ಷಣದ ಮುಖ್ಯ ವಾಹಿನಿಗೆ ತರಬೇಕು. ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳು ಈ ಕೆಟ್ಟ ವ್ಯವಸ್ಥೆಯಿಂದ ಹೊರಬಂದು ತಮ್ಮ ಹಕ್ಕುಗಳ ಕುರಿತು ಜಾಗೃತಿ ಹೊಂದಿ ದೇಶದ ಉತ್ತಮ ನಾಗರಿಕರಾಗಬೇಕು ಎಂದು ಹೇಳಿದರು. ನಂತರ ಮಾತನಾಡಿ ಇಂಡಿ ತಾಲೂಕು ಪಂಚಾಯಿತಿ ತಾಂತ್ರಿಕ ಸಂಯೋಜಕರಾದ ಸಾಹೀಲ್ ಧನಶಟ್ಟಿ ಅವರು ಮಾತನಾಡಿ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯಕ್ಕೆ ಕಷ್ಟವಾಗುವಂಥ ಕೆಲಸಗಳನ್ನು ಮಾಡುತ್ತಾ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.
ಪೌಷ್ಟಿಕ ಆಹಾರ ಕೊರತೆಯಿಂದಾಗಿ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಕೆಲವೊಮ್ಮ ತಮ್ಮ ಜೀವವನ್ನೆ? ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಬಾಲ ಕಾರ್ಮಿಕ ಪದ್ಧತಿಯಿಂದ ಉಂಟಾಗುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯ ತುಂಬಾ ಇದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ, ವ್ಯವಸ್ಥಾಪಕರಾದ ಮುರಗೇಶ ನಾರಾಯಣಪುರ, ವಾಯ್ ಡಿ ಮನಗೂಳಿ, ಶ್ರೀಮತಿ ಸುಮಿತ್ರಾ ಎಂ ನಾಯಕ ಭಾರತಿ ಹದ್ದೇವಾಡಿ, ರಾಜೇಶ್ವರಿ ಕುಂಬಾರ, ರಾಜು ಚವ್ಹಾಣ, ಪ್ರಭಾಕರ ಪೂಜಾರಿ, ಯಲ್ಲಪ್ಪ ಮಾದರ, ಸಿದ್ದು ಲೋನಿ, ಮಹಾದೇವ ಕೇರುಟಗಿ, ಎಂ ಎಸ್ ಪಾಟೀಲ್, ಹಣಮಂತ ಮೇಟಿ, ಪ್ರದೀಪ ಹಿಳ್ಳಿ, ರಾಮಗೌಡ ಸರಬಡಗಿ, ಅರುಣ್ ವಾಘಮೂರೇ, ಪ್ರದೀಪ , ನೀತಿನ ಹೊಟಕರ ಕಾಲೇಸಾಬ ಸೈಯದ, ಆನಂದ ಹಾದಿಮನಿ ಸೇರಿದಂತೆ ಅನೇಕರು ಇದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 