ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ ಮಾಧ್ಯಮ ಅಕಾಡೆಮಿಯ ವಾರ್ಷಿಕ ದತ್ತಿ ಪ್ರಶಸ್ತಿ ಸ್ವೀಕರಿಸಿದ ಪತ್ರಕರ್ತ ನಾಗರಾಜ ವೈ
Journalist Nagaraja Y receives the Media Academy's annual endowment award presented by CM Siddaramai
ಕೊಪ್ಪಳ 14: ಕರ್ನಾಟಕ ಮಾಧ್ಯಮ ಅಕಾಡೆಮಿ ಘೋಷಿಸುವ ವಾರ್ಷಿಕ ದತ್ತಿ 2025ನೇ ಸಾಲಿನ ಪ್ರಶಸ್ತಿಗೆ ಕೊಪ್ಪಳದ ಪತ್ರಕರ್ತ ನಾಗರಾಜ್ ವೈ, ಆಯ್ಕೆಯಾಗಿದ್ದು, ಈಚೆಗೆ ಬೆಂಗಳೂರಿನ ವಿಧಾನಸೌಧದ ಬ್ಯಾಠ್ವೇಟ್ ಹಾಲ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿಯ 2025 ನೇ ಸಾಲಿನ ವಿವಿಧ ದತ್ತಿನಿಧಿಗಳ ಪ್ರಶಸ್ತಿಗಳ ಪೈಕಿ " ಪ್ರಜಾ ಸಂದೇಶ ದತ್ತಿ ಪ್ರಶಸ್ತಿ" ಗೆ ಟಿವಿ 5 ವಾಹಿನಿ ಕೊಪ್ಪಳ ಜಿಲ್ಲಾವರದಿಗಾರ ನಾಗರಾಜ್. ವೈ ಆಯ್ಕೆಯಾಗಿದ್ದು ಪ್ರಶಸ್ತಿ ಸ್ವೀಕರಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ದೃಶ್ಯ ಹಾಗೂ ಮುದ್ರಣ ಮಾಧ್ಯಮದಲ್ಲಿ ಸೇವೆ ಸಲ್ಲಿಸುತ್ತಿರುವ ನಾಗರಾಜ್, "ಕೊಪ್ಪಳ ತಾಲೂಕಿನ ಚಿಲಕಮುಖಿ ಗ್ರಾಮದಲ್ಲಿ ಯುವಕನೊಬ್ಬ ಅನ್ಯಜಾತಿ ಯುವತಿಯನ್ನು ಮದುವೆಯಾಗಿರುವ ಕಾರಣಕ್ಕೆ 8 ವರ್ಷಗಳ ಕಾಲ ಬಹಿಷ್ಕಾರ ಹಾಕಿದ ಘಟನೆ ಬಗ್ಗೆ ಟಿವಿ 5 ವಾಹಿನಿಯಲ್ಲಿ ವಿಶೇಷ ವರದಿ ಮಾಡಿದ್ದರು. ಈ ಪರಿಣಾಮಕಾರಿ ಮತ್ತು ವಿಶೇಷ ವರದಿಯನ್ನು ಗುರುತಿಸಿ ಸರಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ ಈ ಗೌರವವನ್ನು ನೀಡಿದೆ. ನಾಗರಾಜ್ಗೆ ಪ್ರಶಸ್ತಿ ಲಭಿಸಿದ್ದು ಕೊಪ್ಪಳ ಜಿಲ್ಲೆಯ ಪತ್ರಕರ್ತ ಬಳಗ ಹರ್ಷ ವ್ಯಕ್ತಪಡಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 