ಹಾವೇರಿ

ನಾಲ್ವರು ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿಯ ಪ್ರಶಸ್ತಿ ಪ್ರದಾನ

ಹಾವೇರಿ: ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಪರಿಗಣಿಸಿ ನಾಡಿದ ವಿವಿಧ ಪತ್ರಕರ್ತರನ್ನು ಮಾಧ್ಯಮ ವಾರ್ಷಿಕ ಪ್ರಶಸ್ತಿ ಮತ್ತು ದತ್ತಿ ಪ್ರಶಸ್ತಿಗಳಿಗೆ ಆಯ್ಕೆ ಮಾಡಿದೆ. ಅದರಲ್ಲಿ ಜಿಲ್ಲೆಯ ನಾಲ್ವರು ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿಯ ಪ್ರಶಸ್ತಿ ಲಭಿಸಿದೆ.ಸಂಯುಕ್ತ ಕರ್ನಾಟಕ ಪತ್ರಿಕೆಯ ಪ್ರಕಾಶ ಜೋಶಿ ಮತ್ತು ನಾಗರಾಜ ಕುರವತ್ತೇರ ಅವರಿಗೆ 2019ನೇ ಸಾಲಿನ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಲಭಿಸಿದೆ.2022ನೇ ಸಾಲಿನ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಶಿಗ್ಗಾಂವಿ ವಿಜಯ ಕರ್ನಾಟಕ ಪತ್ರಿಕೆ ವರದಿಗಾರ ಪಿ.ಎಂ.ಸತ್ಯಪ್ಪನವರ ಮತ್ತು ಸವಣೂರು ವಿಜಯವಾಣಿ ಪತ್ರಿಕೆಯ ವರದಿಗಾರ ಆನಂದ ಮತ್ತಿಗಟ್ಟಿ ಆಯ್ಕೆಯಾಗಿದ್ದಾರೆ.ವಾರ್ಷಿಕ ಪ್ರಶಸ್ತಿ ಪುರಸ್ಕೃತರಿಗೆ ತಲಾ ರೂ.25 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಗುವುದು.

         ಬೆಂಗಳೂರಿನಲ್ಲಿ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸಧಾಶಿವ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ ಜಿಲ್ಲೆಯ ನಾಲ್ವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು ನಾಲ್ಕು ವರ್ಷಗಳ ಪ್ರಶಸ್ತಿಗೆ 124 ಮಂದಿ ಪತ್ರಕರ್ತರು ಹಾಗೂ ದತ್ತಿ ಪ್ರಶಸ್ತಿಗೆ 21 ಮಂದಿ ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ 

ಸುದ್ದಿ ಓದಿ