ಹೂವಿನ ಹಡಗಲಿ

ಪತ್ರಕರ್ತರು ಸಾಮಾಜಿಕ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು: ಶಾಸಕ ಕೃಷ್ಣನಾಯ್ಕ

ಪತ್ರಕರ್ತರು ಸಾಮಾಜಿಕ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು: ಶಾಸಕ ಕೃಷ್ಣನಾಯ್ಕ

 ಹೂವಿನಹಡಗಲಿ 20: ಪತ್ರಕರ್ತರು ಸಾಮಾಜಿಕ ಹೊಣೆಗಾರಿಕೆಯನ್ನು ಅರಿತು ನಿಷ್ಪಕ್ಷಪಾತ ಹಾಗೂ ನೈಜ ಸುದ್ದಿಗಳನ್ನು ಜನರಿಗೆ ತಲುಪಿಸುವ ಮೂಲಕ ಸಮಾಜದ ಆರೋಗ್ಯಕರ ಬೆಳವಣಿಗೆಗೆ ಕೊಡುಗೆ ನೀಡಬೇಕು ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.  

ಪಟ್ಟಣದ ಜಿಬಿಆರ್ ಕಾಲೇಜಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೋಮವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.  

ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಮಹತ್ವದ ಪಾತ್ರ ವಹಿಸುತ್ತಿದ್ದು, ಸತ್ಯ, ನಿಷ್ಪಕ್ಷಪಾತತೆ ಹಾಗೂ ಜನಪರ ಮೌಲ್ಯಗಳನ್ನು ಎತ್ತಿಹಿಡಿಯುವ ಮೂಲಕ ಪತ್ರಕರ್ತರು ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.  

ಈ ಸಂದರ್ಭದಲ್ಲಿ ಪಟ್ಟಣದ ಪತ್ರಿಕಾ ಭವನದ ನವೀಕರಣಕ್ಕಾಗಿ ?5 ಲಕ್ಷ ಅನುದಾನವನ್ನು ಒಂದು ತಿಂಗಳೊಳಗೆ ಬಿಡುಗಡೆ ಮಾಡುವುದಾಗಿ ಶಾಸಕ ಕೃಷ್ಣನಾಯ್ಕ ಘೋಷಿಸಿದರು.  ಗವಿಮಠದ ಡಾ. ಹಿರಿಶಾಂತವೀರ ಸ್ವಾಮೀಜಿ ಆಶೀರ್ವಚನ ನೀಡಿ, ವಿದ್ಯಾರ್ಥಿಗಳು ಪ್ರತಿನಿತ್ಯ ಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಓದುವ ಹವ್ಯಾಸವೇ ಜ್ಞಾನ ಮತ್ತು ಯಶಸ್ಸಿನ ಮೆಟ್ಟಿಲಾಗಿದೆ ಎಂದು ಹೇಳಿದರು.  

ಕಾರ್ಯಕ್ರಮದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಇಗೋಳ ಚಿದಾನಂದ, ಪುರಸಭೆ ಮಾಜಿ ಅಧ್ಯಕ್ಷ ವಾರದ ಗೌಸ್ ಮೊಹಿದ್ದೀನ್, ಜಿಬಿಆರ್ ಕಾಲೇಜಿನ ಪ್ರಾಚಾರ್ಯ ಎಸ್‌.ಎಸ್‌. ಪಾಟೀಲ, ಅಮರೇಗೌಡ ಪಾಟೀಲ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಪಿ. ಸತ್ಯನಾರಾಯಣ ಸೇರಿದಂತೆ ಹಲವರು ಮಾತನಾಡಿದರು.  

ತಹಶೀಲ್ದಾರ್ ಸಿ.ಕೆ. ನಾಗರಾಜ್, ತಾಪಂ ಇಒ ಕೆ.ಎಂ. ಗುರುಬಸವರಾಜ್, ಜಿ. ಪರಮೇಶ್ವರ ಹಾಗೂ ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿಶ್ವನಾಥ ಹಳ್ಳಿಗುಡಿ ಅಧ್ಯಕ್ಷತೆ ವಹಿಸಿದ್ದರು.  

ಈ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನಿವೃತ್ತ ವೈದ್ಯಾಧಿಕಾರಿ ಡಾ. ಸುಭಾಷ್ ಚಂದ್ರ, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಆನಂದ ದೊಣ್ಣಿ, ಪರಿಸರ ಸಂರಕ್ಷಣೆಯಲ್ಲಿ ತೊಡಗಿರುವ ಬೀರ​‍್ಪ, ಪ್ರಗತಿಪರ ಕೃಷಿಕ ಸಜ್ಜಿ ಶರಣಪ್ಪ ಹಾಗೂ ಸಂಗೀತ ಶಿಕ್ಷಕ ಮೌಲಾಸಾಬ್ ಅವರನ್ನು ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.  

ಪತ್ರಕರ್ತ ಎಂ.ಪಿ.ಎಂ. ಶಿವಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಚ್‌. ಚಂದ್ರ​‍್ಪ ಕಾರ್ಯಕ್ರಮ ನಿರೂಪಿಸಿದರು. ಕೆ. ಸೋಮಶೇಖರ್, ಪಿ. ವೀರಣ್ಣ, ಎಂ. ನಿಂಗಪ್ಪ, ಎಸ್‌. ನಿಂಗರಾಜ್, ಚಂದ್ರು ಕೊಂಚಿಗೇರಿ, ಎಸ್‌.ಎಂ. ಬಸವರಾಜ್, ಅಶೋಕ್ ಮುದೇಗೌಡ, ಮಧುಸೂದನ್, ಕೆ. ಅಯ್ಯನಗೌಡ, ಎಸ್‌. ಅಶ್ವತ್ ನಾರಾಯಣ, ಎಲ್‌. ಅಕ್ಬರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. 


ಸುದ್ದಿ ಓದಿ