ಶಾಲೆಯಲ್ಲಿ ಸಂಭ್ರಮದ ಕೃಷ್ಣ ಜನ್ಮಾಷ್ಟಮಿ ಆಚರಣೆ
Joyful Krishna Janmashtami celebration at school
ವಿಜಯಪುರ 04: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಿ. ಎಂ. ಪಾಟೀಲ ಸಿಬಿಎಸ್ಇ ಶಾಲೆಯಲ್ಲಿ ಇಂದು ಶುಕ್ರವಾರ ಕೃಷ್ಣ ಜನ್ಮಾಷ್ಟಮಿಯನ್ನು ಸಜಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಶಿಕ್ಷಕ ವೃಂದದವರ ಕೃಷ್ಣನ ಭಜನೆಯ ಮೂಲಕ ಕಾರ್ಯಕ್ರಮ ಪ್ರಾರಾಂಭವಾಯಿತು. ಕೃಷ್ಣನು ಮಾಡಿದ ಮಹತ್ಕಾರ್ಯಗಳ ಕುರಿತು ಎಂಟನೇ ತರಗತಿಯ ವಿದ್ಯಾರ್ಥಿನಿ ಮೃನ್ಮಯಿ ಪ್ರಾಸ್ತವಿಕ ಮಾತನಾಡಿದಳು. ಎಲ್ಲ ಸದನದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಮೊಸರಿನ ಗಡಿಗೆ ಒಡೆಯುವ ಸ್ಪರ್ಧೆ ನೋಡುಗರ ಮೈ ನವಿರೇಳಿಸುವಂತ ಮಾಡಿತು. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಬಾಲ ಗೋಪಾಲ ಮತ್ತು ರಾಧೆಯ ವೇಷಭೂಷಣದಲ್ಲಿ ಬಂದು ಇಡೀ ಶಾಲಾ ಆವರಣವನ್ನು ನಂದಗೋಕುಲವನ್ನಾಗಿ ಮಾಡಿದರು.
ಪ್ರೌಢ ಶಾಲಾ ಎಲ್ಲಾ ವಿದ್ಯಾರ್ಥಿಗಳು. ಶಾಲಾ ಮೈದಾನಕ್ಕಿಳಿದು ಕೋಲಾಟ ಆಡಿದರು. ಪ್ರಾಚಾರ್ಯರು ಸೇರಿದಂತೆ ಎಲ್ಲರೂ ಸಮೂಹ ನೃತ್ಯದಲ್ಲಿ ಪಾಲ್ಗೊಂಡರು. ವಿದ್ಯಾರ್ಥಿಗಳ ಹಾಡು ಕುಣಿತ ಕೇಕೆ ಮುಗಿಲು ಮುಟ್ಟುವಂತಿತ್ತು. ಪ್ರಾರ್ಥನಾ ಸಭೆಯ ಮಂತ್ರಿ ಸ್ನೇಹಾ ಪೂಜಾರಿ ನಿರೂಪಿಸಿದರು. ಮಕ್ಕಳ ಈ ಉತ್ಸಾಹ ಮತ್ತು ಕ್ರಿಯಾಶೀಲತೆಯನ್ನು ಪ್ರಾಚಾರ್ಯೆ ವಸುಧಾ ನಾರ್ವೇಕರ ಪ್ರಶಂಸಿಸಿದರು. ಈ ಸಂದರ್ಭದಲ್ಲಿ ಶಾಲೆಯ ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 