ಮಾದಕ ವಸ್ತುಗಳಿಂದ ದೂರ ಇರಲು ನ್ಯಾಯಾಧೀಶೆ ಕರೆ
Judge calls for staying away from drugs
ಮಾದಕ ವಸ್ತುಗಳಿಂದ ದೂರ ಇರಲು ನ್ಯಾಯಾಧೀಶೆ ಕರೆ
ಕಾರವಾರ 25: ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರ ಇರಲು ಕಾರವಾರದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಕವಿತಾ ಉಂಡೋಡಿ ಕರೆ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಉ.ಕ. ಕಾರವಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪೋಲಿಸ್ ಇಲಾಖೆ, ಕಾರವಾರದ ಪ್ರೀಮಿಯರ್ ಸೈನ್ಸ್ ಎಂಡ್ ಕಾಮರ್ಸ್ ಪಿ ಯು ಕಾಲೇಜ್, ಇವರ ಸಂಯುಕ್ತ ಆಶ್ರಯದಲ್ಲಿ ಮಾದಕ ವಸ್ತು ಜಾಗೃತಿ ಮತ್ತು ಮಾದಕವಸ್ತು ಮುಕ್ತ ಭಾರತಕ್ಕಾಗಿ ಸ್ವಾಸ್ಥ್ಯ ಸಂಚರಣೆ ಯೋಜನೆ, 2025 ಅಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮವು ಪ್ರೀಮಿಯರ್ ಕಾಲೇಜ ಸಭಾ ಭವನದಲ್ಲಿ ಶನಿವಾರ ಉದ್ಘಾಟಿಸಿ ಮಾತನಾಡಿದರು. ಭಾರತದಲ್ಲಿ ಮಾದಕ ವಸ್ತು ಸೇವನೆ, ಸಾಗಟ ಒಂದು ಪಿಡುಗಾಗಿದೆ. ವಿದ್ಯಾರ್ಥಿಗಳು ಇದಕ್ಕೆ ಬಲಿಯಾಗುತ್ತಿದ್ದಾರೆ. ಕಾರಣ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ದೂರ ಇರಬೇಕು. ಇದೊಂದು ಸಮಾಜಿಕ ಪಿಡುಗು . ಇದರ ಬಗ್ಗೆ ಎಲ್ಲಾದರೂ ಮಾಹಿತಿ ಸಿಕ್ಕರೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದರು. ವಿದ್ಯಾರ್ಥಿಗಳು ಉತ್ತಮ ಹವ್ಯಾಸ ರೂಢಿಸಿಕೊಳ್ಳಿ. ಮಹನೀಯರ ಜೀವನ ಚರಿತ್ರೆ ಓದಿ. ನೈತಿಕ ಶಕ್ತಿ ಹೆಚ್ಚಿಸಿಕೊಳ್ಳಲು ಕರೆ ನೀಡಿದರು. ಪ್ರೀಮಿಯರ್ ಸೈನ್ಸ್ ಎಂಡ್ ಕಾಮರ್ಸ್ ಪಿ. ಯು. ಕಾಲೇಜ್ ನ ಪ್ರಾಂಶುಪಾಲ ಆರ್. ಗೋವಿಂದಪ್ಪ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಮ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ., ಪೊಲೀಸ್ ಉಪಾಧೀಕ್ಷಕ ಎಸ್.ವಿ.ಗೀರೀಶ್ ಉಪಸ್ಥಿತರಿದ್ದರು. ಶಿರವಾಡದ ಮಾರಿಯಾ ಮಾಗೋ ಫ್ಲೋರಾ ಆಸ್ಪತ್ರೆಯ ವೈದ್ಯೆ ಡಾ. ನಮಿತಾ ವರ್ಗೀಸ್ ಉಪನ್ಯಾಸ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 