ಹೂವಿನ ಹಡಗಲಿ

ಆಸ್ಪತ್ರೆಗೆ ನ್ಯಾಯಾಧೀಶರ ದಿಢೀರ್ ಭೇಟಿ: ತರಾಟೆ

ಆಸ್ಪತ್ರೆಗೆ ನ್ಯಾಯಾಧೀಶರ ದಿಢೀರ್ ಭೇಟಿ: ತರಾಟೆ

ಹೂವಿನಹಡಗಲಿ 25: ಪಟ್ಟಣದ ನೂರು ಹಾಸಿಗೆ ಸಾರ್ವಜನಿಕ ನೂರು ಹಾಸಿಗೆ ಆಸ್ಪತ್ರೆಗೆ ಸಿವಿಲ್ ನ್ಯಾಯಾಧೀಶ ಸಿ.ಕೆ.ವೀರೇಶ ಕುಮಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ, ಸರ್ಕಾರಿ ಅಭಿಯೋಜಕ ಅಜ್ಜಯ್ಯ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಅವ್ಯವಸ್ಥೆಯ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. 

ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಿಢೀರ ಭೇಟಿ ನೀಡಿ ಪರೀಶೀಲನೆ ಮಾಡಿದ ಅವರು ಆಸ್ಪತ್ರೆಯ ಎಲ್ಲಾ ವಾರ್ಡ್‌ಗಳಲ್ಲಿ, ಶೌಚಾಲಯ,ಅಪರೇಷನ್ ಕೊಠಡಿ ಸೇರದಿಂತೆ ಎಲ್ಲಾ ವಿಭಾಗಳಿಗೂ ಸಂಚರಿಸಿ ಅಲ್ಲಿನ ಅವ್ಯವಸ್ಥೆ ಕಂಡು ಆಸ್ಪತ್ರೆಯ ವ್ಯವಸ್ಥಾಪಕ ರತ್ನಕರ ಅವರನ್ನು ತರಾಟೆಗೆ ತೆಗೆದುಕೊಂಡು ಸರಿಪಡಿಸದಿದ್ದರೆ ಶಿಸ್ತುಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. 

ಪ್ರತಿ ದಿನ ಆಸ್ಪತ್ರೆಯ ಎಲ್ಲಾ ವಾರ್ಡ್‌ಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಕೆಲ ನ್ಯೂನ್ಯತೆಗಳನ್ನು ಸರಿಪಡಿಸಲು ತಿಳಿಸಲಾಯಿತು..ಶೌಚಾಲಯಗಳು ಸ್ವಚ್ಛತೆ ಇಲ್ಲದೇ ಕಂಡು ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದ ಅವರು ಅಲ್ಲಿನ ರೋಗಿಗಳೊಂದಿಗೆ ಚಿಕಿತ್ಸೆ ಕುರಿತು ಮಾಹಿತಿ ಪಡೆದುಕೊಂಡರು. ನಾಳೆ ಮತ್ತೆ ನಾನು ಆಸ್ಪತ್ರೆಗೆ ಭೇಟಿ ನೀಡುತ್ತೇನೆ ಸರಿಪಡಿಸಿಕೊಳ್ಳಿ ಎಂದರು. 


ಸುದ್ದಿ ಓದಿ