ಸಾವಿರ ಸಸಿ ನೆಟ್ಟು ಪರಿಸರ ದಿನ ಆಚರಿಸಿದ ನ್ಯಾಯಾಧೀಶರು ನ್ಯಾಯಾಂಗ ಇಲಾಖೆಯಿಂದ ಲಕ್ಷ ವೃಕ್ಷೋತ್ಸವ ಅಭಿಯಾನ
ಲೋಕದರ್ಶನ ವರದಿ
ವಿಜಯಪುರ 05: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರ ಹೊರ ವಲಯದ ಎಸ್. ಹೈಪಾರ್ಟ್ ಎದುರಿನಲ್ಲಿ ಮಂಜೂರಾದ ನ್ಯಾಯಾಂಗ ಇಲಾಖೆ ನೌಕರರ ವಸತಿ ಗೃಹದ ಆವರಣದಲ್ಲಿ ಲಕ್ಷ ವೃಕ್ಷೋತ್ಸವ ಅಭಿಯಾನದ ಭಾಗವಾಗಿ ನ್ಯಾಯಾಧೀಶರು ಅಂದಾಜು ಸಾವಿರ ಸಸಿ ನೆಡುವ ಮೂಲಕ ಪರಿಸರ ದಿನವನ್ನು ವಿಶೇಷವಾಗಿ ಆಚರಿಸಿದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹರೀಶ ಎ. ಸಸಿ ನೆಟ್ಟು ನೀರುಣಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್. ಹಾಗರಗಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಡಿ.ಜಿ. ಬಿರಾದಾರ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಮಲ್ಲಿನಾಥ, ಬಿ. ಕುಸನಾಳ, ಶಿವರುದ್ರ್ಪ ಕಬಾಡಗಿ, ವಿಜಯಪುರ ಜಿಲ್ಲಾ ನ್ಯಾಯಾಂಗ ಇಲಾಖೆ ನೌಕರರ ಸಂಘದ ಅಧ್ಯಕ್ಷ ರವಿಂದ್ರ ಅರಕೇರಿ ಸೇರಿದಂತೆ ಎಲ್ಲ ಗಣ್ಯರು ಸುಮಾರು 1,000 ಸಸಿಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಿದರು.