ಕಾರವಾರ

ನ್ಯಾಯಾಧೀಶರೇ ರಸ್ತೆಗಿಳಿದು ಕಸ ಗುಡಿಸಿದರು; “ಎಲ್ಲೆಂದರಲ್ಲಿ ಕಸ ಹಾಕಬೇಡಿ!” ಖಡಕ್ ಸಂದೇಶ

ನ್ಯಾಯಾಧೀಶರೇ ರಸ್ತೆಗಿಳಿದು ಕಸ ಗುಡಿಸಿದರು; “ಎಲ್ಲೆಂದರಲ್ಲಿ ಕಸ ಹಾಕಬೇಡಿ!” ಖಡಕ್ ಸಂದೇಶ
Judges themselves took to the streets to sweep up garbage; a stern message: "Do not dump trash indis

 ಲೋಕದರ್ಶನ ವರದಿ  

ಮುಂಡಗೋಡ  06: “ಸ್ವಚ್ಛ ಮುಂಡಗೋಡ ಹಿ ನಮ್ಮ ಹೆಮ್ಮೆ, ನಮ್ಮ ಜವಾಬ್ದಾರಿ”ಎಂಬ ಮಹೋನ್ನತ ಆಶಯದೊಂದಿಗೆ ಪಟ್ಟಣದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಪಟ್ಟಣ ಸ್ವಚ್ಛವಾಗಿರಬೇಕು ಎಂಬ ಸಂದೇಶ ಸಾರುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ನ್ಯಾಯಾಧೀಶರೇ ರಸ್ತೆಗಿಳಿದು ಕೈಜೋಡಿಸಿದ್ದು ವಿಶೇಷ ಗಮನ ಸೆಳೆಯಿತು. “ಸ್ವಚ್ಛ ಮುಂಡಗೋಡ ಹಿ ನಮ್ಮ ಹೆಮ್ಮೆ, ನಮ್ಮ ಜವಾಬ್ದಾರಿ” ಎಂಬ ಆಶಯದೊಂದಿಗೆ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪಟ್ಟಣ ಪಂಚಾಯಿತಿ, ತಾಲೂಕು ಆಡಳಿತ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಅಭಿಯಾನ ನಡೆಯಿತು.

ರಸ್ತೆಗಿಳಿದ ನ್ಯಾಯಾಧೀಶರು! ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಗೌರವಾನ್ವಿತ ನ್ಯಾಯಾಧೀಶರಾದ ಶಿವರಾಜ್ ಎಚ್‌.ಎಸ್‌. ಅವರು ಸ್ವತಃ ರಸ್ತೆಗಿಳಿದು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿ ಸಾರ್ವಜನಿಕರಿಗೆ ಸ್ವಚ್ಛತೆಯ ಮಹತ್ವದ ಕುರಿತು ಸಂದೇಶ ನೀಡಿದರು. ಅಭಿಯಾನದಲ್ಲಿ ಸುಮಾರು 400ಕ್ಕೂ ಹೆಚ್ಚು ಜನರನ್ನು ನಾಲ್ಕು ತಂಡಗಳಾಗಿ ವಿಂಗಡಿಸಿ, ಪಟ್ಟಣದ ಪ್ರಮುಖ ನಾಲ್ಕು ರಸ್ತೆಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ಕಸ ಎಸೆದರೆ ದಂಡದ ಎಚ್ಚರಿಕೆ! ಅಂಗಡಿ-ಮುಂಗಟ್ಟುಗಳ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯದಂತೆ ಎಚ್ಚರಿಕೆ ನೀಡಲಾಯಿತು.

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದು ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಂಡು ದಂಡ ವಿಧಿಸುವಂತೆ ನ್ಯಾಯಾಧೀಶರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು. ಕಸವನ್ನು ಎಲ್ಲೆಂದರಲ್ಲಿ ಚೆಲ್ಲುವವರ ಬಗ್ಗೆ ಪಟ್ಟಣ ಪಂಚಾಯಿತಿ ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಗೆ ಸಾರ್ವಜನಿಕರು ದೂರು ನೀಡಬಹುದು ಎಂದು ತಿಳಿಸಲಾಯಿತು. ಸ್ವಚ್ಛತೆಗೆ ಒಂದಾದ ಮುಂಡಗೋಡ! ಅಭಿಯಾನದಲ್ಲಿ ವಕೀಲರು, ಸರ್ಕಾರಿ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು, ವರ್ತಕರು, ವಾಹನ ಚಾಲಕರು ಹಾಗೂ ಸ್ಥಳೀಯರು ಸೇರಿದಂತೆ ಉತ್ಸಾಹದಿಂದ ಪಾಲ್ಗೊಂಡು ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸಿದರು. 


ಸುದ್ದಿ ಓದಿ