ಕಾಗವಾಡ

ಜ್ಯೋತಿಕುಮಾರ ಪಾಟೀಲಗೆ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸ್ಥಾನ; ಗಣ್ಯರಿಂದ ಸನ್ಮಾನ

ಜ್ಯೋತಿಕುಮಾರ ಪಾಟೀಲಗೆ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸ್ಥಾನ; ಗಣ್ಯರಿಂದ ಸನ್ಮಾನ
Jyothikumara Patil appointed as a member of the Sri Renuka Yellamma Kshetra Development Authority;

ಲೋಕದರ್ಶನ ವರದಿ 

. 


ಕಾಗವಾಡ 13: ಕೃಷಿ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಮೂಲ್ಯ ಸೇವೆ ಸಲ್ಲಿಸಿ, ಸಾಮಾನ್ಯ ಜನರೊಂದಿಗೆ ಆತ್ಮೀಯ ಸಂಬಂಧ ಬೆಳೆಸಿಕೊಂಡು, ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡಿರುವ ಯುವ ನಾಯಕ ಹಾಗೂ ದತ್ತ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಜ್ಯೋತಿಕುಮಾರ ಪಾಟೀಲ ಅವರನ್ನು ಅವರ ಸೇವಾ ಕಾರ್ಯಗಳನ್ನು ಗುರುತಿಸಿ ಕರ್ನಾಟಕ ಸರ್ಕಾರ ವಿವಿಧ ರಾಜ್ಯಗಳ ಲಕ್ಷಾಂತರ ಭಕ್ತರ ಆರಾಧ್ಯ ದೇವತೆಯಾಗಿರುವ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನೇಮಕ ಮಾಡಿ, ಅವರಿಗೆ ಮಹತ್ವದ ಜವಾಬ್ದಾರಿಯನ್ನು ನೀಡಿದೆ. 


ಗುರುವಾರ ದಿ. 12 ರಂದು ಉಗಾರ ಖುರ್ದನ ತಮ್ಮ ನಿವಾಸದಲ್ಲಿ ಶಾಸಕರು ಹಾಗೂ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜು ಕಾಗೆ ಅವರು ಯುವ ನಾಯಕ ಜ್ಯೋತಿಕುಮಾರ ಪಾಟೀಲ ಅವರನ್ನು ಸನ್ಮಾನಿಸಿದರು. 


ಅದೇ ರೀತಿ ಪಟ್ಟಣದ ತಹಶೀಲ್ದಾರರ ಕಚೇರಿಯಲ್ಲಿ ತಹಶೀಲ್ದಾರ ರವೀಂದ್ರ ಹಾದಿಮನಿ, ಗ್ರೇಡ್‌-2 ತಹಶೀಲ್ದಾರ ರಶ್ಮಿ ಜಕಾತಿ ಸೇರಿದಂತೆ ಗಣ್ಯರ ಉಪಸ್ಥಿತಿಯಲ್ಲಿ ಜ್ಯೋತಿಕುಮಾರ ಪಾಟೀಲ ಅವರನ್ನು ಸನ್ಮಾನಿಸಲಾಯಿತು. 


ಸನ್ಮಾನ ಸ್ವೀಕರಿಸಿ ಜ್ಯೋತಿಕುಮಾರ ಪಾಟೀಲ ಮಾತನಾಡಿ, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಉತ್ತಮವಾದ ಸುವರ್ಣಾವಕಾಶ ದೊರೆಕಿದ್ದು, ನನ್ನ ಮೇಲೆ ವಿಶ್ವಾಸವಿಟ್ಟು ಈ ಜವಾಬ್ದಾರಿಯನ್ನು ನೀಡಿದ ಕರ್ನಾಟಕ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಮತ್ತು ದೊರೆತ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ ಎಂದು ತಿಳಿಸಿದರು. 


ಈ ವೇಳೆ ಕಾಗವಾಡ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕಾಕಾಸಾಬ ಪಾಟೀಲ, ಮುಖಂಡರಾದ ರಮೇಶ ಚೌಗುಲೆ, ಚಿದಾನಂದ ಆವಟಿ, ಪ್ರಕಾಶ ಪಾಟೀಲ, ಸಿದ್ದು ವಡಿಯರ, ಸುಧೀರ ಹುದ್ದಾರ, ಪವನ ಪಾಟೀಲ, ಪೋಪಟ ಪಾಟೀಲ, ರಾಜು ಲಾಂಡಗೆ, ಬಾಳಾಸಾಹೇಬ ಕಲ್ಲೋಳೆ, ಜನಾರ್ದನ ಧೊಂಡಾರೆ, ವಿಶಾಲ ಧೊಂಡಾರೆ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು. 


ಸುದ್ದಿ ಓದಿ