ಬಳ್ಳಾರಿ

ಎಬಿವಿಪಿ ಬಳ್ಳಾರಿ ವಿಭಾಗ ಸಂಚಾಲಕರಾಗಿ ಕೆ. ದೀಲೀಪ್ ಕುಮಾರ್ ನೇಮಕ

ಎಬಿವಿಪಿ ಬಳ್ಳಾರಿ ವಿಭಾಗ ಸಂಚಾಲಕರಾಗಿ ಕೆ. ದೀಲೀಪ್ ಕುಮಾರ್ ನೇಮಕ

ಲೋಕದರ್ಶನ ವರದಿ 

ಬಳ್ಳಾರಿ 07 : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು  ಕರ್ನಾಟಕ ಉತ್ತರ ಪ್ರಾಂತದ ವತಿಯಿಂದ ಮುರುಡೇಶ್ವರದಲ್ಲಿ ನಡೆದ ಪ್ರಾಂತ ಅಭ್ಯಾಸ ವರ್ಗದಲ್ಲಿ ನೂತನ ಸಂಘಟನಾ ಜವಾಬ್ದಾರಿಗಳನ್ನು ಘೋಷಿಸಲಾಯಿತು. ಈ ಸಂದರ್ಭದಲ್ಲಿ ಕೆ. ದೀಲೀಪ್ ಕುಮಾರ್ ಅವರನ್ನು ಬಳ್ಳಾರಿ ವಿಭಾಗ ಸಂಚಾಲಕರಾಗಿ ಆಯ್ಕೆ ಮಾಡಿ ಜವಾಬ್ದಾರಿ ವಹಿಸಲಾಯಿತು.  ಕೆ. ದೀಲೀಪ್ ಕುಮಾರ್ ಅವರು ವಿದ್ಯಾರ್ಥಿ ಪರಿಷತ್ತಿನಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ವಿದ್ಯಾರ್ಥಿ ಸಂಘಟನೆ, ಸೇವಾ ಚಟುವಟಿಕೆಗಳು ಹಾಗೂ ರಾಷ್ಟ್ರೀಯ ವಿಚಾರಗಳ ಪ್ರಸಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅವರ ಕಾರ್ಯಕ್ಷಮತೆಯನ್ನು ಪರಿಗಣಿಸಿ ಈ ಜವಾಬ್ದಾರಿಯನ್ನು ನೀಡಲಾಗಿದೆ. ಈ ಆಯ್ಕೆಯನ್ನು ಸಂಘಟನೆಯ ಹಿರಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸ್ವಾಗತಿಸಿ, ಕೆ. ದೀಲೀಪ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿ, ನೂತನ ಜವಾಬ್ದಾರಿಯಲ್ಲಿ ಯಶಸ್ಸು ಕೋರಿ ಶುಭ ಹಾರೈಸಿದರು. 


ಸುದ್ದಿ ಓದಿ