ಎಬಿವಿಪಿ ಬಳ್ಳಾರಿ ವಿಭಾಗ ಸಂಚಾಲಕರಾಗಿ ಕೆ. ದೀಲೀಪ್ ಕುಮಾರ್ ನೇಮಕ
K. Dileep Kumar appointed as ABVP Ballari Division Convener
ಲೋಕದರ್ಶನ ವರದಿ
ಬಳ್ಳಾರಿ 07 : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಕರ್ನಾಟಕ ಉತ್ತರ ಪ್ರಾಂತದ ವತಿಯಿಂದ ಮುರುಡೇಶ್ವರದಲ್ಲಿ ನಡೆದ ಪ್ರಾಂತ ಅಭ್ಯಾಸ ವರ್ಗದಲ್ಲಿ ನೂತನ ಸಂಘಟನಾ ಜವಾಬ್ದಾರಿಗಳನ್ನು ಘೋಷಿಸಲಾಯಿತು. ಈ ಸಂದರ್ಭದಲ್ಲಿ ಕೆ. ದೀಲೀಪ್ ಕುಮಾರ್ ಅವರನ್ನು ಬಳ್ಳಾರಿ ವಿಭಾಗ ಸಂಚಾಲಕರಾಗಿ ಆಯ್ಕೆ ಮಾಡಿ ಜವಾಬ್ದಾರಿ ವಹಿಸಲಾಯಿತು. ಕೆ. ದೀಲೀಪ್ ಕುಮಾರ್ ಅವರು ವಿದ್ಯಾರ್ಥಿ ಪರಿಷತ್ತಿನಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ವಿದ್ಯಾರ್ಥಿ ಸಂಘಟನೆ, ಸೇವಾ ಚಟುವಟಿಕೆಗಳು ಹಾಗೂ ರಾಷ್ಟ್ರೀಯ ವಿಚಾರಗಳ ಪ್ರಸಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅವರ ಕಾರ್ಯಕ್ಷಮತೆಯನ್ನು ಪರಿಗಣಿಸಿ ಈ ಜವಾಬ್ದಾರಿಯನ್ನು ನೀಡಲಾಗಿದೆ. ಈ ಆಯ್ಕೆಯನ್ನು ಸಂಘಟನೆಯ ಹಿರಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸ್ವಾಗತಿಸಿ, ಕೆ. ದೀಲೀಪ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿ, ನೂತನ ಜವಾಬ್ದಾರಿಯಲ್ಲಿ ಯಶಸ್ಸು ಕೋರಿ ಶುಭ ಹಾರೈಸಿದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 