ಕೆ. ಕಸ್ತೂರಿ ರಂಗನ್ ನಿಧನ
K. Kasturirangan passes away
ನವದೆಹಲಿ 25: ಇಸ್ರೊ ಮಾಜಿ ಅಧ್ಯಕ್ಷ ಮತ್ತು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ. ಕಸ್ತೂರಿ ರಂಗನ್ ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಏಪ್ರಿಲ್ 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎನ್‌ಇಪಿಯಲ್ಲಿನ ಶಿಕ್ಷಣ ಸುಧಾರಣೆಗಳ ಹಿಂದಿನ ವ್ಯಕ್ತಿ ಎಂದು ಕರೆಯಲ್ಪಡುವ ಕಸ್ತೂರಿರಂಗನ್, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ರಾಜ್ಯಸಭೆಯ ಸದಸ್ಯರಾಗಿ(2003–09), ಯೋಜನಾ ಆಯೋಗದ ಸದಸ್ಯರಾಗಿಯೂ ಕೆಲಸ ಮಾಡಿದ್ದರು. 2004ರ ಏಪ್ರಿಲ್‌ನಿಂದ 2009ರವರೆಗೆ ಬೆಂಗಳೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್‌ಡ್ ಸ್ಟಡೀಸ ಸಂಸ್ಥೆಯ ನಿರ್ದೇಶಕರಾಗಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 