ಬಳ್ಳಾರಿ

ಹೊರಗುತ್ತಿಗೆ ನೌಕರರ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಕೆ ಬಸಪ್ಪ ನೇಮಕ

ಹೊರಗುತ್ತಿಗೆ ನೌಕರರ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಕೆ ಬಸಪ್ಪ ನೇಮಕ


             ಬಳ್ಳಾರಿ  ನ.26 :  ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ಬಳ್ಳಾರಿ  ಜಿಲ್ಲಾಧ್ಯಕ್ಷರಾಗಿ ಕೆ ಬಸಪ್ಪ, ಚರಕುಂಟೆ ನೇಮಕವಾಗಿದ್ದಾರೆ ಎಂದು ಸಂಸ್ಥಾಪಕ ಅಧ್ಯಕ್ಷ ಸುಧಾಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ  ಕೆ ಬಸಪ್ಪ ಇವರು ಬಳ್ಳಾರಿ ನಗರದ ಬಳ್ಳಾರಿ ವೈದ್ಯಕಿಯ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸೂಪರ್ವೈಸರ್ ಆಗಿ   ಕಾರ್ಯನಿರ್ವಹಿಸುತ್ತಿದ್ದಾರೆ.

           ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ  ನೇಮಕಾತಿ ಆದೇಶ ಪತ್ರವನ್ನು ನೀಡಿ  ಸಂಸ್ಥಾಪಕ ಅಧ್ಯಕ್ಷ ಸುಧಾಕರ್ ಮಾತನಾಡಿ, ಜಿಲ್ಲೆಯ ಹೊರಗುತ್ತಿಗೆ ನೌಕರರ ಎಲ್ಲಾ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿ ಪರಿಹಾರಕ್ಕೆ ಪ್ರಯತ್ನಿಸಬೇಕು ಮತ್ತು ಹೆಚ್ಚಿನ ಮಾಹಿತಿ ಅಥವಾ ಸಹಾಯ ಸಹಕಾರ ಬೇಕಾದಲ್ಲಿ ನನ್ನನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು. 

           ನೇಮಕಾತಿ ಆದೇಶ ಪತ್ರವನ್ನು ಪಡೆದುಕೊಂಡ ಕೆ ಬಸಪ್ಪ ಮಾತನಾಡಿ, ನನ್ನ ಮೇಲೆ ವಿಶ್ವಾಸ ಮತ್ತು ನಂಬಿಕೆ ಇಟ್ಟು ರಾಜ್ಯಾಧ್ಯಕ್ಷರು ನನಗೆ ಈ ಜವಾಬ್ದಾರಿಯನ್ನು ನೀಡಿದ್ದಾರೆ ಅವರ ನಂಬಿಕೆಯನ್ನು ಉಳಿಸಿಕೊಂಡು ಎಲ್ಲಾ ಹೊರಗುತ್ತಿಗೆ ನೌಕರರ ಹಿತಕ್ಕಾಗಿ ಕೆಲಸ ಮಾಡುತ್ತೇನೆ ಎಂದರು. 


ಸುದ್ದಿ ಓದಿ