ಕಾರ್ಯಕಾರಣಿಗೆ ನೇಮಕ
ತಾಳಿಕೋಟೆ, :ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಕಾರಣಿ ಸದಸ್ಯರಾಗಿ ತಾಲೂಕಿನ ಭಂಟನೂರ ಗ್ರಾಮದ ಹಿರಿಯ ಬಿಜೆಪಿ ಮುಖಂಡ ಸಂಗನಗೌಡ ಹೆಗರಡ್ಡಿ ಅವರನ್ನು ನೇಮಕ ಮಾಡಲಾಗಿದೆ.ಭಂಟನೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ, ಗ್ರಾಮ ಪಂಚಾಯತ ಮಾಜಿ ಅದ್ಯಕ್ಷರಾಗಿ ಸೇವೆ ಸಲ್ಲಿಸಿದ ಹೆಗರಡ್ಡಿ ಅವರು ಸಂಘಟನಾ ಚತುರರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ನಿಟ್ಟಿನಲ್ಲಿ ದೇವರ ಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಅವರ ಸೂಚನೆ ಮೇರೆಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್.ಎಸ್.ಪಾಟೀಲ ನೇಮಕ ಮಾಡಿದ್ದಾರೆ.