ಕೆಎಲ್‌ಇ ಹೇಲ್ತ್ ಗೈಡ್ ನೇರ ಫೋನ್-ಇನ್ ಕಾರ್ಯಕ್ರಮ
KLE Health Guide direct phone-in program
ಬೆಳಗಾವಿ 10: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಶುಕ್ರವಾರ ದಿ. 11ನೆ ಜುಲೈ 2025 ರಂದು ಬೆಳಿಗ್ಗೆ 10 ರಿಂದ 11 ಗಂಟೆ ವರೆಗೆ ಚಿಕ್ಕ ಮಕ್ಕಳಲ್ಲಿ ಕಂಡುಬರುವ ಸಾಮಾನ್ಯ ರೋಗಗಳು ಮತ್ತು ಚಿಕಿತ್ಸೆ ಕುರಿತು ನೇರ ಫೋನ್-ಇನ್ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳಗಾವಿಯ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಚಿಕ್ಕ ಮಕ್ಕಳ ವೈದ್ಯೆ ಡಾ. ಸೋನಾಲಿ ಬಿಜ್ಜರಗ್ಗಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು 9019904904 ಸಂಖ್ಯೆಗೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ರೇಡಿಯೋ ಈಗ ಮೊಬೈಲ್ ಆಫ್‌ನಲ್ಲೂ ಲಭ್ಯ ಎಂದು ನಿಲಯ ನಿರ್ದೇಶಕ ಡಾ. ಸುನಿಲ್ ಜಲಾಲಪೂರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ 