ಕೆಎಲ್ಇ ವೇಣುಧ್ವನಿ 90.4 ಎಫ್. ಎಮ್.
KLE Venudhvani 90.4 F. M.
ಲೋಕದರ್ಶನ ವರದಿ
ಬೆಳಗಾವಿ 06: ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶುಕ್ರವಾರ ದಿನಾಂಕ 06 ಮಾರ್ಚ್ 2026 ರಂದು ಬೆಳಗ್ಗೆ 10 ರಿಂದ 11 ಗಂಟೆ ವರೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಳಗಾವಿಯ ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಮನೋವೈದ್ಯ ಡಾ. ಭೀಮಸೇನ್ ಟೆಕ್ಕಳಕಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪರೀಕ್ಷೆ ಸಮಯದಲ್ಲಿ ಡಜಿಟಲ್ ವ್ಯಾಕುಲತೆ ಅಥವಾ ಮೊಬೈಲ್/ಗ್ಯಾಜೆಟಗಳ ಬಳಕೆ ನಿಯಂತ್ರಿಸುವ ಕುರಿತು ಜಾಗೃತಿ ಮೂಡಿಸಿದರು ಹಾಗೂ ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷ ಪಿ. ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 