ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಅಮಾನತಿಗೆ ಕೆಎಸ್‌ಎಟಿ ತಡೆ

ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಅಮಾನತಿಗೆ ಕೆಎಸ್‌ಎಟಿ ತಡೆ

ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಅಮಾನತಿಗೆ ಕೆಎಸ್‌ಎಟಿ ತಡೆ  

ಬೆಂಗಳೂರು: ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಅಮಾನತುಗೊಂಡಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪ್ರವೀಣ್ ಕುಮಾರ್ ಅವರ ಅಮಾನತು ಆದೇಶಕ್ಕೆ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಸ್‌ಎಟಿ) ಗುರುವಾರ ತಡೆಯಾಜ್ಞೆ ನೀಡಿದೆ.   

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಅವರನ್ನು ರಾಜಕೀಯ ಒತ್ತಡದಿಂದಾಗಿ ಏಕಪಕ್ಷೀಯವಾಗಿ ಅಮಾನತು ಮಾಡಲಾಗಿದೆ. ಈ ಆದೇಶವನ್ನು ಪ್ರಶ್ನಿಸಿ  ಕಚೇರಿಯ ಕಾನೂನು ತಂಡವು ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ (ಕೆಎಸ್‌ಎಟಿ) ಈ ಕ್ರಮವನ್ನು ಪ್ರಶ್ನಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯ ಮಂಡಳಿಯು, ರಾಜ್ಯ ಸರ್ಕಾರದ ಅಮಾನತು ಆದೇಶಕ್ಕೆ ಅಕ್ಟೋಬರ್ 30ರಂದು ತಡೆ ನೀಡಿದೆ ಎಂದು "ಎಕ್ಸ್‌" ಖಾತೆಯಲ್ಲಿ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ.   

’ಯಾವುದೇ ರೀತಿಯ ಬೆದರಿಕೆಯು, ಆರ್‌ಎಸ್‌ಎಸ್ನ ರಾಷ್ಟ್ರ ನಿರ್ಮಾಣದ ಆದರ್ಶಗಳನ್ನು ತಡೆಯಲು ಸಾಧ್ಯವಿಲ್ಲ ಎಂಬ ಎಚ್ಚರಿಕೆಯನ್ನು ಕಾಂಗ್ರೆಸ್ ಸರ್ಕಾರಕ್ಕೆ ನೀಡಿದಂತಾಗಿದ್ದು, ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ಈ ಸಂದರ್ಭದಲ್ಲಿ ಸಹಕಾರ ನೀಡಿರುವ ಹಿರಿಯ ವಕೀಲರಾದ ಪ್ರಭುಲಿಂಗ ನಾವದಗಿ ಅವರಿಗೆ ಧನ್ಯವಾದಗಳು’ ಎಂದು ಹೇಳಿದರು.  

ಬಳಿಕ ಪ್ರವೀಣ್ ಕುಮಾರ್ ಅವರೊಂದಿಗೆ ಮಾತನಾಡಿದ್ದ ತೇಜಸ್ವಿ ಸೂರ್ಯ, ’ಕಾನೂನುಬಾಹಿರ ಅಮಾನತು’ ಅನ್ನು ಪ್ರಶ್ನಿಸಲು ಸಂಬಂಧಪಟ್ಟ ನ್ಯಾಯಮಂಡಳಿ ಮತ್ತು ನ್ಯಾಯಾಲಯಗಳ ಮುಂದೆ ವೈಯಕ್ತಿಕವಾಗಿ ಹಾಜರಾಗುವುದಾಗಿ ಭರವಸೆ ನೀಡಿದ್ದರು. ಸರ್ಕಾರಿ ನೌಕರರು ಆರ್‌ಎಸ್‌ಎಸ್ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಕ್ಕನ್ನು ಎತ್ತಿ ಹಿಡಿದಿರುವ ಹಲವಾರು ಹೈಕೋರ್ಟ್ಗಳ ತೀಪುಗಳಿವೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದರು.  

ಅಕ್ಟೋಬರ್ 12ರಂದು ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಸಂಘದ ಸಮವಸ್ತ್ರ ಧರಿಸಿ ಭಾಗವಹಿಸಿದ್ದಕ್ಕಾಗಿ ಸಿರ್ವಾರ್ ತಾಲೂಕಿನಲ್ಲಿ  ನಿಯೋಜಿತರಾದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಅವರನ್ನು ಸರ್ಕಾರಿ ನೌಕರರಾಗಿ (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿ) ಒಂದು ಸಂಘಟನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾರಣಕ್ಕಾಗಿ ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ಪ್ರವೀಣ್ ಕುಮಾರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು. ಇದು ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತಲ್ಲದೆ, ರಾಜಕೀಯ ವಾಕ್ಸಮರಕ್ಕೂ ಗುರಿಯಾಗಿತ್ತು. 


ಸುದ್ದಿ ಓದಿ