ಮಹಿಳಾ ಸಬಲೀಕರಣಕ್ಕೆ ಕೆಎಸ್ಎಡಬ್ಲ್ಯುಯುಹಿಸೆಲ್ಕೊ ಸೋಲಾರ್ ಒಪ್ಪಂದ
KSAWUHSELCO Solar Agreement for Women's Empowerment
ಲೋಕದರ್ಶನ ವರದಿ
ವಿಜಯಪುರ 26: ನಗರ ಹಾಗೂ ಗ್ರಾಮೀಣ ಮಹಿಳೆಯರ ಸುಸ್ಥಿರ ಅಭಿವೃದ್ಧಿ ಮತ್ತು ಸಬಲೀಕರಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ ಹಾಗೂ ಸೆಲ್ಕೊ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಸಂಸ್ಥೆಗಳ ನಡುವೆ ಇತ್ತೀಚಿಗೆ ಪರಸ್ಪರ ಸಹಕಾರ ಒಪ್ಪಂದ (ಎಂಒಯು)ಕ್ಕೆ ಸಹಿ ಮಾಡಲಾಯಿತು.
ಅಹಲ್ಯಾಬಾಯಿ ಮಹಿಳಾ ಅಧ್ಯಯನ ಕೇಂದ್ರವು ಬೋಧನೆ, ಸಂಶೋಧನೆ ಹಾಗೂ ವಿಸ್ತರಣಾ ಚಟುವಟಿಕೆಗಳ ಮೂಲಕ ಮಹಿಳಾ ಸಬಲೀಕರಣಕ್ಕಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿವಿಧ ಸಂಘ-ಸಂಸ್ಥೆಗಳೊಂದಿಗೆ ಸಹಭಾಗಿತ್ವದ ಮೂಲಕ ಮಹಿಳೆಯರ ಜೀವನಮಟ್ಟ ಸುಧಾರಣೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸೆಲ್ಕೊ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ನೊಂದಿಗೆ ಮಾಡಿಕೊಂಡಿರುವ ಒಪ್ಪಂದವು ಮಹತ್ವದ ಹೆಜ್ಜೆಯಾಗಿದೆ.
ಈ ಒಪ್ಪಂದದಡಿ ನಗರ ಮತ್ತು ಗ್ರಾಮೀಣ ಮಹಿಳೆಯರಲ್ಲಿ ಪರ್ಯಾಯ ಹಾಗೂ ನವೀಕರಿಸಬಹುದಾದ ಇಂಧನ ಮೂಲಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳು, ತರಬೇತಿ ಕಾರ್ಯಾಗಾರಗಳು ಹಾಗೂ ಮಹಿಳಾ ಸಬಲೀಕರಣಕ್ಕೆ ಪೂರಕವಾದ ವಿವಿಧ ಚಟುವಟಿಕೆಗಳನ್ನು ಜಂಟಿಯಾಗಿ ಆಯೋಜಿಸಲಾಗುವುದು. ಮಹಿಳೆಯರ ಆರ್ಥಿಕ ಸ್ವಾವಲಂಬನೆ, ಪರಿಸರ ಸ್ನೇಹಿ ಜೀವನಶೈಲಿ ಹಾಗೂ ಸುಸ್ಥಿರ ಅಭಿವೃದ್ಧಿಗೆ ಈ ಸಹಯೋಗವು ನೆರವಾಗಲಿದೆ.
ಒಪ್ಪಂದ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ. ಲಕ್ಷ್ಮಿದೇವಿ ವಾಯ್, ಸೆಲ್ಕೊ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ನ ಪ್ರಾದೇಶಿಕ ಉಪ ವ್ಯವಸ್ಥಾಪಕ ಪ್ರಸನ್ನ ಹೆಗಡೆ, ಸಂಹಿತಾ ಮುಜುಂದಾರ, ಮಹಿಳಾ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕಿ ಡಾ.ಭಾಗ್ಯಶ್ರೀ ದೊಡಮನಿ, ಸಹಸಂಶೋಧಕರಾದ ಡಾ. ಸರೋಜಾ ಸಂತಿ, ಡಾ. ರಜಿಯಾಬೇಗಂ ನದಾಫ್, ಅಂಬಿಕಾ ಮಾಲಗಾರ, ಸೆಲ್ಕೊ ವಿಜಯಪುರ ಘಟಕದ ವ್ಯವಸ್ಥಾಪಕ ಬಸನಗೌಡ ಬಿರಾದಾರ ಹಾಗೂ ಮಾರಾಟ ಪ್ರತಿನಿಧಿ ಸಂತೋಷ ಪಾಟೀಲ ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 